ಶನಿವಾರ, ಜನವರಿ 28, 2023
13 °C

MCD Election Results: ಎಎಪಿ 56 ಸ್ಥಾನಗಳಲ್ಲಿ ಗೆಲುವು, 77ರಲ್ಲಿ ಮುನ್ನಡೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆಮ್ ಆದ್ಮಿ ಪಕ್ಷವು ಅಧಿಕಾರ ಹಿಡಿಯುವ ಸಂಭವ ಕಂಡುಬಂದಿದೆ.

ಬೆಳಿಗ್ಗೆ 11.30ರ ವೇಳೆಗೆ ಎಎಪಿ 56 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದು, 77ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಈ ಮೂಲಕ ಮ್ಯಾಜಿಕ್ ಸಂಖ್ಯೆ ಆದ 126ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. 

ಇನ್ನೊಂದೆಡೆ ಬಿಜೆಪಿ 46 ಸ್ಥಾನಗಳಲ್ಲಿ ಗೆಲುವು ದಾಖಲಿಸಿದ್ದು, 58 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಒಟ್ಟು 104 ಸ್ಥಾನಗಳಷ್ಟೇ ಮುನ್ನಡೆ ಗಳಿಸಿದೆ.

ಕಾಂಗ್ರೆಸ್ ನಾಲ್ಕು ಸ್ಥಾನಗಳಲ್ಲಿ ಜಯ ಗಳಿಸಿದ್ದು, ಆರು ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.

43 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ಎಂಸಿಡಿಯಲ್ಲಿ 15 ವರ್ಷಗಳ ಕಾಲ ಆಡಳಿತ ನಡೆಸಿದ್ದ ಬಿಜೆಪಿಗೆ ಎಎಪಿ ತಿರುಗೇಟು ನೀಡಿದೆ.

ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‌ಗಳಿಗೆ ಡಿಸೆಂಬರ್ 4, ಭಾನುವಾರದಂದು ಮತದಾನ ನಡೆದಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು