ಮಂಗಳವಾರ, ಡಿಸೆಂಬರ್ 7, 2021
27 °C

ನೌಕಾಪಡೆಗೆ ಜಲಾಂತರ್ಗಾಮಿ ’ಐಎನ್‌ಎಸ್‌ ವೇಲಾ‘ ಹಸ್ತಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಜಗಾಂವ ಡಾಕ್‌ ಶಿಪ್‌ಬಿಲ್ಡರ್ಸ್‌ ಲಿಮಿಟೆಡ್‌ (ಎಂಡಿಎಲ್‌) ನಿರ್ಮಿತ ‘ಸ್ಕಾರ್ಪಿಯಾನ್‌’ ಸರಣಿಯ ನಾಲ್ಕನೇ ಜಲಾಂತರ್ಗಾಮಿ ‘ಐಎನ್‌ಎಸ್‌ ವೇಲಾ’ವನ್ನು ಭಾರತೀಯ ನೌಕಾಪಡೆಗೆ ಹಸ್ತಾಂತರಿಸಲಾಗಿದೆ.

‘ಪ್ರಾಜೆಕ್ಟ್‌ ಪಿ–75’ಅಡಿ ನಿರ್ಮಿಸಲಾಗಿರುವ ಈ ಜಲಾಂತರ್ಗಾಮಿ ಕಾರ್ಯಾಚರಣೆಗೆ ಶೀಘ್ರವೇ ಚಾಲನೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಮಹತ್ವಾಕಾಂಕ್ಷೆಯ ‘ಆತ್ಮನಿರ್ಭರ ಭಾರತ’ ಹಾಗೂ ‘ಮೇಕ್‌ ಇನ್‌ ಇಂಡಿಯಾ’ ಯೋಜನೆಗಳಡಿ ಈ ಜಲಾಂತರ್ಗಾಮಿಗಳನ್ನು ನಿರ್ಮಿಸಲಾಗುತ್ತಿದೆ.

‘ವೇಲಾ’ ಹಸ್ತಾಂತರದ ಮೂಲಕ ನೌಕಾಪಡೆಯ ಅಗತ್ಯಗಳಿಗೆ ತಕ್ಕಂತೆ ಹಡಗುಕಟ್ಟೆಗಳ ನಿರ್ಮಾಣ ಹಾಗೂ ಜಲಾಂತರ್ಗಾಮಿಗಳ ಅಭಿವೃದ್ಧಿಯಲ್ಲಿ ಎಂಡಿಎಲ್‌ ತನ್ನ ಸಾಮರ್ಥ್ಯ– ವೃತ್ತಿಪರತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈಗಾಗಲೇ ಐಎನ್‌ಎಸ್‌ ಕಲ್ವರಿ, ಐಎನ್‌ಎಸ್‌ ಖಂಡೇರಿ ಹಾಗೂ ಐಎನ್‌ಎಸ್‌ ಕಾರಂಜ್  ಜಲಾಂತರ್ಗಾಮಿಗಳನ್ನು ನೌಕಾಪಡೆಗೆ ಹಸ್ತಾಂತರಿಸಲಾಗಿದೆ. ಇದರೊಂದಿಗೆ ಅತ್ಯಾಧುನಿಕ ಜಲಾಂತರ್ಗಾಮಿಗಳನ್ನು ನಿರ್ಮಿಸುವ ದೇಶಗಳ ಸಾಲಿಗೆ ಭಾರತವೂ ಸೇರಿದಂತಾಗಿದೆ.

ಐದನೇ ಜಲಾಂತರ್ಗಾಮಿ ಐಎನ್‌ಎಸ್‌ ವಾಗಿರ್ ಇದೇ ಡಿಸೆಂಬರ್‌ಗೆ ಕಾರ್ಯಾಚರಣೆ ಆರಂಭಿಸುವ ನಿರೀಕ್ಷೆ ಇದೆ. ಆರನೇ ಜಲಾಂತರ್ಗಾಮಿ ‘ಐಎನ್‌ಎಸ್‌ ವಾಗ್ಶೀರ್‌’ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು