ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಿಲ್ಗಿಟ್–ಬಾಲ್ಟಿಸ್ತಾನದಲ್ಲಿ ಚುನಾವಣೆಯು ಅತಿಕ್ರಮಣ ಮರೆಮಾಚುವ ಯತ್ನ: ಭಾರತ

Last Updated 29 ಸೆಪ್ಟೆಂಬರ್ 2020, 12:07 IST
ಅಕ್ಷರ ಗಾತ್ರ

ನವದೆಹಲಿ: ಪಾಕಿಸ್ತಾನವು ಗಿಲ್ಗಿಟ್–ಬಾಲ್ಟಿಸ್ತಾನ ಶಾಸನಸಭೆಗೆ ಚುನಾವಣೆ ನಡೆಸಲು ಮುಂದಾಗಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಪಾಕಿಸ್ತಾನದ ಈ ಕ್ರಮವು ಅಕ್ರಮವಾಗಿ ವಶಪಡಿಸಿಕೊಂಡಿರುವುದನ್ನು ಮರೆಮಾಚುವ ಯತ್ನ ಎಂದು ಭಾರತ ಹೇಳಿದೆ.

‘ಗಿಲ್ಗಿಟ್–ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸುವುದನ್ನು ಪ್ರತಿಭಟಿಸಿ ಪಾಕಿಸ್ತಾನಕ್ಕೆ ಸಂದೇಶ ಕಳುಹಿಸಲಾಗಿದೆ. ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು–ಕಾಶ್ಮೀರ ಮತ್ತು ಲಡಾಖ್‌ನ ಇಡೀ ಭೂಪ್ರದೇಶಗಳು 1947ರಿಂದಲೇ ಭಾರತದ ಅವಿಭಾಜ್ಯ ಅಂಗಗಳಾಗಿವೆ. ಗಿಲ್ಗಿಟ್–ಬಾಲ್ಟಿಸ್ತಾನವೂ ಭಾರತದ್ದೇ’ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ.

ಗಿಲ್ಗಿಟ್–ಬಾಲ್ಟಿಸ್ತಾನ ಶಾಸನಸಭೆಗೆ ನವೆಂಬರ್ 15ರಂದು ಚುನಾವಣೆ ನಡೆಸುವುದಾಗಿ ಪಾಕಿಸ್ತಾನ ಸರ್ಕಾರ ಇತ್ತೀಚೆಗೆ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT