ಗುಜರಾತ್: ಸರ್ಕಾರಿ ವೈದ್ಯರ ಮುಷ್ಕರ, ವೈದ್ಯಕೀಯ ಸೇವೆ ಅಸ್ತವ್ಯಸ್ತ

ಅಹಮದಾಬಾದ್: ತಾತ್ಕಾಲಿಕ ಸೇವೆಗಳನ್ನು ಕಾನೂನುಬದ್ಧಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುಜರಾತ್‌ನಲ್ಲಿ ಸುಮಾರು 10 ಸಾವಿರ ಸರ್ಕಾರಿ ವೈದ್ಯರು ಸೋಮವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಇದರಿಂದ ರಾಜ್ಯ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯಕೀಯ ಸೇವೆಯಲ್ಲಿ ತೀವ್ರ ತೊಂದರೆ ಉಂಟಾಗಿದೆ.
ರೋಗಿಗಳ ಚಿಕಿತ್ಸೆಗೆ ನಿರಾಕರಿಸಿ ವೈದ್ಯರು ಮುಷ್ಕರಕ್ಕೆ ಇಳಿದಿರುವುದರಿಂದ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ರಾಜ್ಯ ಸರ್ಕಾರಿ ಆರೋಗ್ಯ ಇಲಾಖೆಯ ಗುಜರಾತ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸೊಸೈಟಿಯು (ಜಿಎಂಇಆರ್‌ಎಸ್) ನಿರ್ವಹಿಸುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಳು ವ್ಯತ್ಯಯಗೊಂಡಿವೆ.
‘ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದಾದ್ಯಂತ ಸುಮಾರು 10 ಸಾವಿರ ಸರ್ಕಾರಿ ವೈದ್ಯರು ಸೋಮವಾರದಿಂದ ಅನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಎಲ್ಲಾ ರೀತಿಯ ಆಸ್ಪತ್ರೆಗಳ ವೈದ್ಯರೂ ಇಂದಿನಿಂದ ಮುಷ್ಕರದಲ್ಲಿ ಭಾಗವಹಿಸಿದ್ದಾರೆ’ ಎಂದು ಗುಜರಾತ್ ವೈದ್ಯಕೀಯ ಶಿಕ್ಷಕರ ಸಂಘದ (ಜಿಎಂಟಿಎ) ಅಧ್ಯಕ್ಷ ಡಾ.ರಜನೀಶ್ ಪಟೇಲ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.