ಶನಿವಾರ, ಮೇ 15, 2021
25 °C

ಸಿಬಿಐ ನಿರ್ದೇಶಕರ ನೇಮಕ: ಮೇ 2ರ ನಂತರ ಸಭೆ –ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸಿಬಿಐಗೆ ನಿರ್ದೇಶಕರ ನೇಮಿಸುವ ಕುರಿತ ಚರ್ಚೆಗೆ ಮೇ 2ರ ನಂತರ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕರೆಯಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಸಮಿತಿ ಸದಸ್ಯರಾಗಿರುವ ಲೋಕಸಭೆಯಲ್ಲಿನ ಕಾಂಗ್ರೆಸ್‌ ಪಕ್ಷದ ಮುಖಂಡ ಅಧೀರ್‌ ರಂಜನ್‌ ಚೌಧರಿ ಅವರನ್ನು ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯದ ಕಾರ್ಯದರ್ಶಿ ಸಂಪರ್ಕಿಸಿದ್ದಾರೆ. ಮೇ 2ರವರೆಗೂ ನಾನು ಲಭ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ ಎಂದು ಕೇಂದ್ರ ತನ್ನ ಪ್ರಮಾಣಪತ್ರದಲ್ಲಿ ಮಾಹಿತಿ ನೀಡಿದೆ.

ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮೇ 13ಕ್ಕೆ ಮುಂದೂಡಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು