ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ ವಿಧಾನಸಭೆ ಚುನಾವಣೆ: ಟಿಎಂಸಿ ಪ್ರಣಾಳಿಕೆ ಬಿಡುಗಡೆ

Last Updated 25 ಜನವರಿ 2023, 12:43 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಮೇಘಾಲಯ ವಿಧಾನಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದೆ. ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ ನೀಡಲಾಗುವುದು ಎಂದು ಹೇಳಿದೆ.

ಪಕ್ಷದ ರಾಷ್ಟ್ರೀಯ ವಕ್ತಾರ ಪ್ರಕಾಶ್ ಮಜುಂದಾರ್ ಅವರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಪ್ರಣಾಳಿಕೆಯ ಮುಖ್ಯಾಂಶಗಳು...

* ಮುಂದಿನ ಐದು ವರ್ಷಗಳಲ್ಲಿ 3 ಲಕ್ಷ ಉದ್ಯೋಗ ಸೃಷ್ಟಿ

* 21 ರಿಂದ 40 ವರ್ಷದೊಳಗಿನ ಪ್ರತಿ ನಿರುದ್ಯೋಗಿ ಯುವಕರಿಗೆ ಮಾಸಿಕ ₹ 1 ಸಾವಿರ ನಿರುದ್ಯೋಗಿ ಭತ್ಯೆ ನೀಡಲಾಗುವುದು.

* ಪ್ರತಿ ಮನೆಗೆ ₹ 1 ಸಾವಿರ ಆರ್ಥಿಕ ನೆರವು

* ಅಂಗವಿಕಲರು, ಒಂಟಿ ತಾಯಂದಿರು, ವಿಧವೆಯರು ಹಾಗೂ ಹಿರಿಯ ನಾಗರಿಕರಿಗೆ ಪಿಂಚಣಿ ಹೆಚ್ಚಳ

* ರಾಜ್ಯದ ಎಲ್ಲಾ ರೈತರಿಗೆ ₹ 10 ಸಾವಿರ ಆರ್ಥಿಕ ನೆರವು

* ಇ–ಪಡಿತರ ಕಾರ್ಡ್‌ಗಳ ವಿತರಣೆ

* ರಾಜ್ಯದ ಹಲವು ಕಡೆ ತಾಯಿ ಹಾಗೂ ಮಕ್ಕಳ ಆರೈಕೆ ಕೇಂದ್ರಗಳ ಸ್ಥಾಪನೆ

* ಮನೆಗಳಿಗೆ ಪೈಪ್‌ಲೈನ್‌ ಮೂಲಕ ನೀರು ಸರಬರಾಜು

* ರಾಜ್ಯದ ಎಲ್ಲಾ 6459 ಗ್ರಾಮಗಳಿಗೆ ರಸ್ತೆ

ಮೇಘಾಲಯದಲ್ಲಿ ವಿಧಾನಸಭಾ ಚುನಾವಣೆಯು ಫೆಬ್ರವರಿ 27 ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT