ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ ಕ್ರಿಶ್ಚಿಯನ್ನರ ರಕ್ಷಣೆಗಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಬಿಜೆಪಿ ಸಚಿವ

ಮೇಘಾಲಯದ ಏಕೈಕ ಬಿಜೆಪಿ ಸಚಿವ ಸನ್‌ಬೋರ್ ಶುಲ್ಲೈ
Last Updated 4 ಡಿಸೆಂಬರ್ 2021, 16:09 IST
ಅಕ್ಷರ ಗಾತ್ರ

ಶಿಲ್ಲಾಂಗ್: 'ಕರ್ನಾಟಕದಲ್ಲಿನ ಕ್ರಿಶ್ಚಿಯನ್ನರಿಗೆ ಸೂಕ್ತ ರಕ್ಷಣೆ ಒದಗಿಸಲು ಕ್ರಮ ಕೈಗೊಳ್ಳಬೇಕು' ಎಂದು ಮೇಘಾಲಯದ ಏಕೈಕ ಬಿಜೆಪಿ ಸಚಿವ ಸನ್‌ಬೋರ್ ಶುಲ್ಲೈ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.

ಈ ಕುರಿತು ಶನಿವಾರ ಪತ್ರ ಬರೆದಿರುವಅವರು, 'ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲೆ ದೌರ್ಜನ್ಯ ನಡೆಯುತ್ತಿವೆ. ಕರ್ನಾಟಕ ಸರ್ಕಾರ ಚರ್ಚ್ ಮತ್ತು ಕ್ರೈಸ್ತರಿಗೆ ಸಂಬಂಧಿಸಿದ ಸಂಘ–ಸಂಸ್ಥೆಗಳ ಸಮೀಕ್ಷೆ ಮಾಡಲು ಹೊರಟಿದೆ. ಈ ಮೂಲಕ ಅಲ್ಪಸಂಖ್ಯಾತರನ್ನು ಹತ್ತಿಕ್ಕಲು ನೋಡುತ್ತಿದೆ' ಎಂದು ತಿಳಿಸಿದ್ದಾರೆ.

'ಕ್ರಿಶ್ಚಿಯನ್ ಸಮುದಾಯವನ್ನು ಈ ಮೂಲಕ ತುಳಿಯಲು ಹೊರಟಿರುವುದು ಸಂಪೂರ್ಣ ಸಂವಿಧಾನಬಾಹಿರ' ಎಂದು ತಿಳಿಸಿದ್ದಾರೆ.

'ಕರ್ನಾಟಕ ಸರ್ಕಾರದ ಈ ನಡೆಯ ಬಗ್ಗೆ ಪ್ರಧಾನಿ ಕಾರ್ಯಾಲಯಕ್ಕೆ ಅನೇಕ ಕ್ರಿಶ್ಚಿಯನ್ ಸಂಘಟನೆಗಳು ದೂರು ಸಲ್ಲಿಸಿವೆ. ಇದನ್ನು ಪರಿಗಣಿಸಿ ಕೂಡಲೇ ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಕ್ರಮ ಕೈಗೊಳ್ಳಲು ಆದೇಶಿಸಬೇಕು' ಎಂದು ಒತ್ತಾಯಿಸಿದ್ದಾರೆ.

'ಕರ್ನಾಟಕ ಸರ್ಕಾರ ಮಾಡಲು ಹೊರಟಿರುವ ಈ ಗಣತಿ ಕಾರ್ಯದಿಂದ ಭಾರತಕ್ಕೆ ವಿಶ್ವಮಟ್ಟದಲ್ಲಿ ಇರುವ ‘ಜಾತ್ಯಾತೀತ ರಾಷ್ಟ್ರ’ ಎಂಬ ಖ್ಯಾತಿಗೆ ಪೆಟ್ಟು ಬೀಳುತ್ತದೆ' ಎಂದಿದ್ದಾರೆ.

ಇತ್ತೀಚೆಗೆ ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ರಾಜ್ಯದಲ್ಲಿನ ಚರ್ಚ್‌ಗಳು ಹಾಗೂ ಕ್ರಿಶ್ಚಿಯನ್ ಸಮುದಾಯದ ಸಂಘ–ಸಂಸ್ಥೆಗಳ ಬಗ್ಗೆ ಗಣತಿ ನಡೆಸಲು ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT