ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ ಫಲಿತಾಂಶ: ಅತಂತ್ರ ವಿಧಾನಸಭೆ ಸಾಧ್ಯತೆ; ಎನ್‌ಎನ್‌ಪಿ ಮುನ್ನಡೆ

Last Updated 2 ಮಾರ್ಚ್ 2023, 5:32 IST
ಅಕ್ಷರ ಗಾತ್ರ

ಶಿಲ್ಲಾಂಗ್‌: ಮೇಘಾಲಯ ವಿಧಾನಸಭೆ ಚುನಾವಣೆಯ ಫಲಿತಾಂಶದ ಚಿತ್ರಣ ಹೊರಬಂದಿದ್ದು ಅಂತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಗಳಿವೆ.

ಆಡಳಿತಾರೂಢ ಕಾರ್ನಾಡ್‌ ಸಂಗ್ಮಾ ನೇತೃತ್ವದ ನ್ಯಾಷನಲ್‌ ಪೀಪಲ್ಸ್‌ ಪಕ್ಷದ(ಎನ್‌ಪಿಪಿ) ಪಕ್ಷ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಯುಡಿಪಿ 8, ಬಿಜೆಪಿ 8, ಟಿಎಂಸಿ 8 ಹಾಗೂ ಇತರರು 9 ಕ್ಷೇತ್ರಗಳಲ್ಲಿ ಮುಂದಿದ್ದಾರೆ. (11 ಗಂಟೆ ಸುಮಾರಿಗೆ)

60 ಸ್ಥಾನಗಳ ವಿಧಾನಸಭೆಯಲ್ಲಿ 31 ಮ್ಯಾಜಿಕ್ ಸಂಖ್ಯೆಯಾಗಿದೆ. ಕಳೆದ ಸಲ ವಿವಿಧ ಪಕ್ಷಗಳ ಜೊತೆ ಸೇರಿ ಎನ್‌ಪಿಪಿ ಸರ್ಕಾರ ರಚನೆ ಮಾಡಿತ್ತು. ಈ ಬಾರಿಯೂ ಯಾವುದೇ ಪಕ್ಷ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರುವ ಸೂಚನೆ ಕಾಣಿಸುತ್ತಿಲ್ಲ.

ಕಳೆದ ಬಾರಿ ಕೇವಲ 2 ಸ್ಥಾನಗಳಲ್ಲಿ ಗೆಲುವು ಕಂಡಿದ್ದ ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಪಡೆದಿರುವುದು ಗಮನಾರ್ಹ. ಕಾಂಗ್ರೆಸ್ 6 ಸೀಟಗಳಲ್ಲಿ ಮುಂದಿದೆ. ಟಿಎಂಸಿ 7 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT