ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ ಚುನಾವಣೆ: ಬಾಂಗ್ಲಾದೇಶ ಗಡಿ ಬಳಿ ನಗದು ವಶ

Last Updated 26 ಫೆಬ್ರುವರಿ 2023, 12:54 IST
ಅಕ್ಷರ ಗಾತ್ರ

ಶಿಲ್ಲಾಂಗ್ : ಇಲ್ಲಿನ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಬಿಎಸ್ಎಫ್ ಭಾರಿ ಪ್ರಮಾಣದ ಹಣ ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಫೆ. 27ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಅಂಗವಾಗಿ ಬಾಂಗ್ಲಾದೇಶದೊಂದಿಗಿನ ಮೇಘಾಲಯದ ಅಂತರರಾಷ್ಟ್ರೀಯ ಗಡಿ ಮುಚ್ಚಿದ ಮರುದಿನ ಈ ಪ್ರಕರಣ ವರದಿಯಾಗಿದೆ.

ಕಳೆದ 48 ಗಂಟೆಗಳಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಅಂತರರಾಷ್ಟ್ರೀಯ ಗಡಿ ಬಳಿ ಭಾರಿ ಪ್ರಮಾಣದ ಹಣ ವಶಪಡಿಸಿಕೊಳ್ಳಲಾಗಿದೆ.

ಭಾರತ-ಬಾಂಗ್ಲಾದೇಶ ಗಡಿಯ ಹ್ಯಾಟ್ ಥೈಮೈ ಪ್ರದೇಶದಲ್ಲಿ 18 ಲಕ್ಷ ಬಾಂಗ್ಲಾದೇಶ ಟಾಕಾ ಹೊಂದಿರುವ ಚೀಲ ಹಾಗೂ ಮತ್ತೊಂದು ಪ್ರಕರಣದಲ್ಲಿ ರಿಂಗ್ಕು ಗ್ರಾಮದಲ್ಲಿ ₹ 3.12 ಲಕ್ಷ ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇಘಾಲಯದ 59 ವಿಧಾನಸಭಾ ಕ್ಷೇತ್ರಗಳಿಗೆ ಸೋಮವಾರ ಬೆಳಿಗ್ಗೆ 7 ರಿಂದ ಸಂಜೆ 4 ರವರೆಗೆ ಚುನಾವಣೆ ನಡೆಯಲಿದ್ದು, ಮಾರ್ಚ್ 2 ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT