ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ: ಮೆಹಬೂಬಾ ಮುಫ್ತಿ ಆರೋಪ

Last Updated 21 ಆಗಸ್ಟ್ 2022, 11:21 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ‘ನನ್ನನ್ನು ಮತ್ತೊಮ್ಮೆ ಗೃಹ ಬಂಧನದಲ್ಲಿರಿಸಲಾಗಿದೆ’ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಭಾನುವಾರ ಟ್ವೀಟ್‌ ಮಾಡಿದ್ದಾರೆ.

‘ಉಗ್ರರಿಂದ ಹತ್ಯೆಗೊಳಗಾದ ಕಾಶ್ಮೀರಿ ಪಂಡಿತ್‌ ಸುನೀಲ್‌ ಕುಮಾರ್‌ ಭಟ್‌ ಅವರ ಕುಟುಂಬವನ್ನು ನಾನು ಭೇಟಿ ಮಾಡಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ರೀತಿ ಮಾಡಿದೆ’ ಎಂದಿದ್ದಾರೆ.

‘ಕೇಂದ್ರ ಸರ್ಕಾರದ ಕೆಟ್ಟ ನೀತಿಗಳಿಂದಾಗಿ ಕಾಶ್ಮೀರಿ ಪಂಡಿತರ ಹತ್ಯೆ ಆಗುತ್ತಿದೆ. ನಾವು ಕಾಶ್ಮೀರಿ ಪಂಡಿತರ ಶತ್ರುಗಳು ಎಂದು ಜಗತ್ತಿಗೆ ತೋರಿಸಲು ನನ್ನನ್ನು ಗೃಹ ಬಂಧನದಲ್ಲಿರಿಸಲಾಗಿದೆ. ಕಾಶ್ಮೀರಿ ಪಂಡಿತರ ಸಂಕಷ್ಟಗಳನ್ನು ಮುಚ್ಚಿಡಲು ಕೇಂದ್ರ ಯತ್ನಿಸುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

ತಮ್ಮ ಮನೆಯ ಗೇಟ್‌ಗಳಿಗೆ ಬೀಗ ಹಾಕಿರುವ ಮತ್ತು ಮನೆಯ ಮುಂದೆ ಸಿಆರ್‌ಪಿಎಫ್‌ನ ವಾಹನವೊಂದು ನಿಂತಿರುವ ಚಿತ್ರವನ್ನೂ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT