ಬುಧವಾರ, ಜನವರಿ 20, 2021
17 °C

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಗೃಹಬಂಧನದಲ್ಲಿಲ್ಲ: ಪೊಲೀಸರ ಸ್ಪಷ್ಟನೆ

ಎಎನ್‌ಐ‌ Updated:

ಅಕ್ಷರ ಗಾತ್ರ : | |

ಶ್ರೀನಗರ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಗೃಹ ಬಂಧನದಲ್ಲಿಲ್ಲ. ಆದರೆ, ಭದ್ರತಾ ಕಾರಣಗಳಿಂದಾಗಿ ಪುಲ್ವಾಮಾಗೆ ಭೇಟಿ ನೀಡದಂತೆ ಸೂಚನೆ ನೀಡಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ನನ್ನನ್ನು ಮತ್ತೆ ಅಕ್ರಮವಾಗಿ ಬಂಧಿಸಲಾಗಿದೆ ಎಂದು ಮುಫ್ತಿ ಅವರು ಹೇಳಿಕೆ ನೀಡಿದ ಹಿನ್ನೆಲೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

‘ಕಳೆದ 2 ದಿನಗಳಿಂದ ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಪಕ್ಷದ ಮುಖಂಡರನ್ನು ಭೇಟಿ ಮಾಡಲು ಜಮ್ಮು–ಕಾಶ್ಮೀರ ಸರ್ಕಾರ ನಿರಾಕರಿಸಿದೆ. ಪುಲ್ವಾಮಾದಲ್ಲಿ ವಹೀದ್‌ ಉರ್‌ ರೆಹಮಾನ್‌ ಕುಟುಂಬಸ್ಥರನ್ನು ಆಧಾರರಹಿತ ಆರೋಪದ ಮೇಲೆ ಬಂಧಿಸಲಾಗಿದೆ. ಜೊತೆಗೆ, ನನ್ನ ಮಗಳನ್ನು ಸಹ ಗೃಹಬಂಧನದಲ್ಲಿರಿಸಲಾಗಿದೆ ಎಂದು ಮುಫ್ತಿ ಆರೋಪಿಸಿದ್ದರು.

ಇದನ್ನೂ ಓದಿ... ಮುಫ್ತಿ, ಪುತ್ರಿ ಗೃಹಬಂಧನ: ‘ವೈಯಕ್ತಿಕ ಸ್ವಾತಂತ್ರ್ಯ‘ ದುರ್ಬಳಕೆ ಆರೋಪ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು