ಗುರುವಾರ , ಸೆಪ್ಟೆಂಬರ್ 23, 2021
22 °C

ಮೆಹಬೂಬಾ ಮುಫ್ತಿಗೆ ಗೃಹ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ನನ್ನನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮಂಗಳವಾರ ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಮೆಹಬೂಬಾ, ತಮ್ಮ ಗುಪ್ಕರ್ ನಿವಾಸದ ಮುಖ್ಯ ದ್ವಾರವನ್ನು ಭದ್ರತಾ ಪಡೆಯ ವಾಹನ ತಡೆದಿರುವ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

‘ನನ್ನನ್ನು ಮಂಗಳವಾರ ಗೃಹಬಂಧನಕ್ಕೆ ಒಳಪಡಿಸಲಾಗಿದೆ. ಕಾಶ್ಮೀರದಲ್ಲಿ ಪರಿಸ್ಥಿತಿಯು ಸಾಮಾನ್ಯಕ್ಕಿಂತ ಬಹಳ ಭಿನ್ನವಾಗಿದೆ. ಇದು ಆಡಳಿತದ ಸಹಜ ಸ್ಥಿತಿಯ ನಕಲಿ ಪ್ರತಿಪಾದನೆಯನ್ನು ಬಹಿರಂಗಪಡಿಸಿದೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಕೇಂದ್ರ ಸರ್ಕಾರವು ಅಫ್ಗಾನಿಸ್ತಾನದ ಜನರ ಹಕ್ಕುಗಳ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ. ಆದರೆ, ಅದೇ ಹಕ್ಕುಗಳನ್ನು ಕಾಶ್ಮೀರದವರಿಗೆ ನಿರಾಕರಿಸುತ್ತಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು