ಶುಕ್ರವಾರ, ಜನವರಿ 27, 2023
17 °C

ಶ್ರದ್ಧಾ ಹತ್ಯೆ ಪ್ರಕರಣ: ಆಫ್ತಾಬ್ 13 ದಿನಗಳ ಕಾಲ ನ್ಯಾಯಾಂಗ ವಶಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಾಲ್ ಸೆಂಟರ್ ಉದ್ಯೋಗಿ ಶ್ರದ್ಧಾ ವಾಲಕರ್ ಹತ್ಯೆಯ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾನನ್ನು ದೆಹಲಿ ಹೈಕೋರ್ಟ್ ಶನಿವಾರ 13 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಳುಪತ್ತೆ ಪರೀಕ್ಷೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲು ಪೊಲೀಸರು ಕಾನೂನು ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ ಎಂದು ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಪರಿಪಾಲನೆ ವಲಯ–2) ಸಾಗರ್ ಪ್ರೀತ್ ಹೂಡಾ ತಿಳಿಸಿದ್ದಾರೆ.

ಇಲ್ಲಿನ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಆರೋಪಿಗೆ ಶುಕ್ರವಾರ ಮೂರು ತಾಸುಗಳ ಕಾಲ ಸುಳ್ಳುಪತ್ತೆ ಪರೀಕ್ಷೆ ನಡೆಸಲಾಯಿತು. ಆಫ್ತಾಬ್‌ನ ಪೊಲೀಸ್ ಕಸ್ಟಡಿ ಅವಧಿಯು ಶನಿವಾರ ಮುಕ್ತಾಯವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು