ಶನಿವಾರ, ಸೆಪ್ಟೆಂಬರ್ 18, 2021
21 °C

ಪೊಲೀಸ್ ಕಸ್ಟಡಿಯಲ್ಲಿರುವ ಮೆಹುಲ್ ಚೋಕ್ಸಿ ಫೋಟೊ ಪ್ರಕಟಿಸಿದ ಸ್ಥಳೀಯ ಮಾಧ್ಯಮ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

iStock Image

ನವದೆಹಲಿ: ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಜ್ಯುವೆಲ್ಲರಿ ಉದ್ಯಮಿ ಡೊಮಿನಿಕಾದಲ್ಲಿ ಬಂಧಿತನಾಗಿ ಅಲ್ಲಿನ ಪೊಲೀಸ್ ಕಸ್ಟಡಿಯಲ್ಲಿ ಇದ್ದಾನೆ.

ಪೊಲೀಸ್ ಸೆರೆಯಲ್ಲಿರುವ ಮೆಹುಲ್ ಚೋಕ್ಸಿಯ ಚಿತ್ರವನ್ನು ಡೊಮಿನಿಕಾದ ಸ್ಥಳೀಯ ಮಾಧ್ಯಮಗಳು ಶನಿವಾರ ಪ್ರಕಟಿಸಿವೆ.

ಮೆಹುಲ್ ಚೋಕ್ಸಿ ಗಡೀಪಾರು ಪ್ರಕ್ರಿಯೆಗೆ ಸಂಬಂಧಿಸಿದಂತೆ ನ್ಯಾಯಾಲಯ ಬುಧವಾರದವರೆಗೆ ವಿಚಾರಣೆ ಮುಂದೂಡಿದೆ. ಅಲ್ಲದೆ, ಮೆಹುಲ್ ಚೋಕ್ಸಿ ಆರೋಗ್ಯದ ಕುರಿತು ಗಮನ ಹರಿಸಿ ಮತ್ತು ಕೋವಿಡ್ 19 ಪರೀಕ್ಷೆ ಮಾಡಿಸಿ ಎಂದು ನ್ಯಾಯಾಲಯ ನಿರ್ದೇಶನ ನೀಡಿತ್ತು. ಅದರಂತೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಚೋಕ್ಸಿ ಬಂಧನ ಮತ್ತು ಗಡೀಪಾರು ಕುರಿತು ಬುಧವಾರ ಅಲ್ಲಿನ ನ್ಯಾಯಾಲಯ ಪರಿಶೀಲಿಸಿ ವರದಿ ನೀಡಲಿದೆ. ಅಲ್ಲದೆ, ಈ ಕುರಿತಂತೆ ಸಲ್ಲಿಸಲಾಗಿರುವ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆಯನ್ನೂ ನ್ಯಾಯಾಲಯ ನಡೆಸಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು