ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿನಲ್ಲಿ ಮುಸ್ಲಿಂ ವ್ಯಕ್ತಿಗಳ ಶವ ಪತ್ತೆ: ಸಿಬಿಐ ತನಿಖೆಗೆ ವಿಎಚ್‌ಪಿ ಆಗ್ರಹ

ಗೋರಕ್ಷಕರಿಂದ ಅಪಹರಣ: ಮೃತ ಕುಟುಂಬ ಸದಸ್ಯರ ಆರೋಪ
Last Updated 17 ಫೆಬ್ರುವರಿ 2023, 13:53 IST
ಅಕ್ಷರ ಗಾತ್ರ

ನವದೆಹಲಿ: ಹರಿಯಾಣದಲ್ಲಿ ಕಾರಿನಲ್ಲಿ ಪತ್ತೆಯಾದ ರಾಜಸ್ಥಾನದ ಇಬ್ಬರು ಮುಸ್ಲಿಂ ವ್ಯಕ್ತಿಗಳ ಶವದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಶುಕ್ರವಾರ ಒತ್ತಾಯಿಸಿದೆ.

ರಾಜಸ್ಥಾನ ಪೊಲೀಸರ ಪ್ರಕಾರ, ಬುಧವಾರ ಗೋರಕ್ಷಕರಿಂದ ಅಪಹರಣಕ್ಕೊಳಗಾಗಿದ್ದ ಇಬ್ಬರು ವ್ಯಕ್ತಿಗಳ ಸಾವಿಗೆ ಸಂಬಂಧಿಸಿದಂತೆ ಆರು ಜನರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಗುರುವಾರ ಬೆಳಿಗ್ಗೆ ಭಿವಾನಿಯ ಲೋಹರು ಎಂಬಲ್ಲಿ ಸುಟ್ಟ ಕಾರಿನೊಳಗೆ ಇಬ್ಬರ ಶವಗಳು ಪತ್ತೆಯಾಗಿವೆ.

ಇಬ್ಬರನ್ನು ಅಪಹರಿಸಿದವರು ಬಜರಂಗದಳಕ್ಕೆ ಸೇರಿದವರು ಎಂದು ಮೃತರ ಕುಟುಂಬ ಸದಸ್ಯರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

‘ಎಫ್‌ಐಆರ್‌ನಲ್ಲಿ ಹೆಸರಿಸಿರುವ ವ್ಯಕ್ತಿಗಳು ಬಜರಂಗದಳದೊಂದಿಗೆ ಸಂಬಂಧ ಹೊಂದಿದ್ದಾರೆ. ಆದರೆ, ಅವರು ಅಪರಾಧದಲ್ಲಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ದೃಢಪಟ್ಟಿಲ್ಲ’ ಎಂದು ರಾಜಸ್ಥಾನದ ಭರತ್ಪುರ ವಲಯದ ಪೊಲೀಸ್ ಇನ್‌ಸ್ಪೆಕ್ಟರ್‌ ಜನರಲ್ ಗೌರವ್ ಶ್ರೀವಾಸ್ತವ ತಿಳಿಸಿದ್ದಾರೆ.

ಈ ಆರೋಪಕ್ಕೆ ಪ್ರತಿಕ್ರಿಯಿಸಿದ ವಿಎಚ್‌ಪಿ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್, ‘ಪ್ರಾಥಮಿಕ ತನಿಖೆ ನಡೆಸದೆ ಕಳ್ಳಸಾಗಾಣಿಕೆದಾರನ ಸಹೋದರ ಹೇಳಿದ ಹೆಸರುಗಳು ಘಟನೆಗೆ ಕಾರಣವೆಂದು ರಾಜಸ್ಥಾನ ಪೊಲೀಸರು ಊಹಿಸಿದ್ದಾರೆಂದು ತೋರುತ್ತದೆ. ಪ್ರಕರಣದ ಬಗ್ಗೆ ನ್ಯಾಯಸಮ್ಮತ ತನಿಖೆ ನಂತರ ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ವ್ಯಕ್ತಿಯನ್ನು ಬಂಧಿಸಬಾರದು’ ಎಂದು ಒತ್ತಾಯಿಸಿದರು.

‘ಈ ಪ್ರಕರಣಗಳಲ್ಲಿ ರಾಜಸ್ಥಾನ ಸರ್ಕಾರದ ಪಾತ್ರವು ಯಾವಾಗಲೂ ಮತ ಬ್ಯಾಂಕ್ ರಾಜಕೀಯದಿಂದ ಪ್ರಭಾವಿತವಾಗಿದೆ. ಈ ಹಿಂದೆಯೂ ಅನೇಕ ಪ್ರಕರಣಗಳಲ್ಲಿ ಇದು ಸಾಬೀತಾಗಿದೆ. ರಾಜಕೀಯ ಕಾರ್ಯಸೂಚಿಯ ಭಾಗವಾಗಿ ಬಜರಂಗದಳದ ಹೆಸರನ್ನು ಅನಗತ್ಯವಾಗಿ ಈ ವಿಷಯಕ್ಕೆ ಎಳೆಯಲಾಗುತ್ತಿದೆ’ ಎಂದು ಜೈನ್ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT