ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದ ಈ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಣೆ

Last Updated 19 ಜನವರಿ 2023, 15:57 IST
ಅಕ್ಷರ ಗಾತ್ರ

ತಿರುವನಂತಪುರಂ: ಕೇರಳದ ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡಲು ತೀರ್ಮಾನಿಸಿದೆ.

ಪ್ರತಿ ಸೆಮಿಸ್ಟರ್‌ನಲ್ಲಿ ಶೇ 2 ರಷ್ಟು ಕೊರತೆ ಹಾಜರಿಯಿದ್ದರೂ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬಹುದು ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮುಖ್ಯಸ್ಥರು ಆದೇಶ ಹೊರಡಿಸಿದ್ದಾರೆ.

ಪ್ರತಿ ಸೆಮಿಸ್ಟರ್‌ನಲ್ಲಿ ಪ್ರತಿ ವಿದ್ಯಾರ್ಥಿಗೆ ಶೇ 75 ರಷ್ಟು ಹಾಜರಾತಿ ಕಡ್ಡಾಯ. ಇನ್ಮುಂದೆ ಈ ವಿವಿಯಲ್ಲಿ ವಿದ್ಯಾರ್ಥಿನಿಯರು ಶೇ 73 ರಷ್ಟು ಹಾಜರಾತಿ ಹೊಂದಿದ್ದರೂ ಪರೀಕ್ಷೆಗೆ ಹಾಜರಾಗಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೊಚ್ಚಿನ್ ವಿವಿಯ ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಅವರು ಸ್ವಾಗತಿಸಿದ್ದು, ಇತರೆ ವಿಶ್ವವಿದ್ಯಾಲಯಗಳು ಈ ಮಾದರಿಯನ್ನು ಅನುಸರಿಸಬಹುದು. ಇದರಿಂದ ಹೆಣ್ಣುಮಕ್ಕಳ ಘನತೆಯನ್ನು ಎತ್ತಿ ಹಿಡಿದಂತಾಗುತ್ತದೆ. ರಾಜ್ಯದ ಅಧೀನದ ವಿವಿಗಳಲ್ಲಿ ಕೂಡ ಮುಟ್ಟಿನ ರಜೆ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಶೀಘ್ರವಾಗಿ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT