ಬುಧವಾರ, ಮಾರ್ಚ್ 29, 2023
32 °C

ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶ 15.4 ಡಿಗ್ರಿ ಸೆ: ಗಾಳಿಯ ಗುಣಮಟ್ಟ ’ಅತ್ಯಂತ ಕಳಪೆ'

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಸತತ ಎರಡನೇ ದಿನವೂ ಗಾಳಿಯ ಗುಣಮಟ್ಟ ಸೂಚ್ಯಂಕವು 'ಅತ್ಯಂತ ಕಳಪೆ' ವಿಭಾಗದಲ್ಲಿ ಮುಂದುವರಿದಿದೆ. ಕನಿಷ್ಠ ತಾಪಮಾನ 15.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು ನಗರದ ವಿವಿಧ ಭಾಗಗಳಲ್ಲಿ ಪಾದರಸದ ಪ್ರಮಾಣ ಹಲವು ಹಂತಗಳಲ್ಲಿ ಏರಿಕೆಯಾಗಿದೆ. 

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಬೆಳಿಗ್ಗೆ ಆರ್ದ್ರತೆಯ ಪ್ರಮಾಣ ಶೇ 85ರಷ್ಟು ದಾಖಲಾಗಿದೆ. ಮಂಗಳವಾರ ಗರಿಷ್ಠ ತಾಪಮಾನವು 28 ಡಿಗ್ರಿ ಸೆ. ನಿಗದಿಯಾಗುವ ಸಾಧ್ಯತೆ. ಸೋಮವಾರ ಕನಿಷ್ಠ ತಾಪಮಾನ 13.6 ಡಿಗ್ರಿ ಹಾಗೂ ಗರಿಷ್ಠ 29.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.  

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕವು ಬೆಳಿಗ್ಗೆ 400ರಷ್ಟಿದ್ದು, 'ಅತ್ಯಂತ ಕಳಪೆ' ವಿಭಾಗದಲ್ಲಿ ದಾಖಲಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು