ನವದೆಹಲಿ: ಸೆಪ್ಟೆಂಬರ್ 1 ರಿಂದ ಮೆಟ್ರೋ ರೈಲು ಸೇವೆಗಳು ಪುನರಾರಂಭಗೊಳ್ಳಬಹುದು. ಆದರೆ, ಶಾಲೆಗಳನ್ನು ಪುನಃ ತೆರೆಯುವ ಸಾಧ್ಯತೆ ಇಲ್ಲ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಈವರೆಗೂ ತೆರೆಯಲು ಅನುಮತಿ ದೊರಕಿರದ ಬಾರ್‌ಗಳಲ್ಲಿ ಮದ್ಯವನ್ನು ತೆಗೆದುಕೊಂಡು ಹೋಗಲು ಕೌಂಟರ್‌ಗಳಲ್ಲಿ ಮಾರಾಟಕ್ಕೆ ಅನುಮತಿ ದೊರಕಬಹುದು ಎನ್ನಲಾಗಿದೆ.
ಕೊರೊನಾ ವೈರಸ್ ಪ್ರೇರಿತ ಲಾಕ್‌ಡೌನ್‌ನಿಂದ ಒಂದೊಂದೇ ಸೇವೆಗಳಪುನರಾರಂಭದಲ್ಲಿ 'ಅನ್‌ಲಾಕ್-4' ಹಂತದಲ್ಲಿ ಸೆಪ್ಟೆಂಬರ್ 1 ರಿಂದ ಮೆಟ್ರೊ ರೈಲು ಸೇವೆಗಳ ಪುನರಾರಂಭಕ್ಕೆ ಅನುಮತಿ ನೀಡಬಹುದು. ಆದರೆ ತಕ್ಷಣ ಶಾಲೆಗಳು ಮತ್ತು ಕಾಲೇಜುಗಳನ್ನು ಪುನಃ ತೆರೆಯಲಾಗುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತುಬಿಎಂಆರ್ ಸಿಎಲ್ ಅಧಿಕಾರಿಗಳು ದೃಢಪಡಿಸಿಲ್ಲ. ಕೇಂದ್ರ ಸರ್ಕಾರದಿಂದ ಈವರೆಗೆ ಯಾವುದೇ ಸೂಚನೆ ಬಂದಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ಈವರೆಗೂ 31 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕು ಹರಡುವಿಕೆಯನ್ನು ತಪ್ಪಿಸಲು ಮಾರ್ಚ್ ಅಂತ್ಯದಲ್ಲಿ ಮೆಟ್ರೊ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.