ಬುಧವಾರ, ಜೂನ್ 16, 2021
22 °C
ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದ ನಾಲ್ವರು ಸದಸ್ಯರ ತಂಡ

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ತನಿಖೆಗೆ ತಂಡ ರಚಿಸಿದ ಕೇಂದ್ರ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ನಂತರ ನಡೆದಿರುವ ಹಿಂಸಾಚಾರಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಿ ತನಿಖೆ ನಡೆಸಲು ಗೃಹ ಸಚಿವಾಲಯ ನಾಲ್ವರು ಸದಸ್ಯರ ತಂಡವನ್ನು ರಚಿಸಿದೆ.

ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದ ತಂಡ, ಈಗಾಗಲೇ ಪಶ್ಚಿಮ ಬಂಗಾಳಕ್ಕೆ ತೆರಳಿದೆ. ಫಲಿತಾಂಶದ ನಂತರ ನಡೆದಿರುವ ಹಿಂಸಾಚಾರದ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸಲು ತಂಡಕ್ಕೆ ಸೂಚಿಸಲಾಗಿದೆ. ಇಂಥ ಘಟನೆಗಳು ನಡೆಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗೃಹ ಸಚಿವಾಲಯ ಬುಧವಾರ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರ ಬರೆದಿದ್ದು ಕ್ರಮ ಕೈಗೊಳ್ಳುವಲ್ಲಿ ರಾಜ್ಯವು ವಿಫಲವಾದರೆ ಈ ವಿಷಯವನ್ನು ‘ಗಂಭೀರವಾಗಿ‘ ಪರಿಗಣಿಸಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ.

ಪಶ್ಚಿಮ ಬಂಗಾಳದಲ್ಲಿ ಫಲಿತಾಂಶ ಘೋಷಣೆಯಾದ ನಂತರದಿಂದ ಮಂಗಳವಾರದವರೆಗೆ ನಡೆದ ಹಿಂಸಾಚಾರದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ.

‘ಟಿಎಂಸಿ ಬೆಂಬಲಿತ ಗೂಂಡಾಗಳು ತನ್ನ ಹಲವು ಕಾರ್ಯಕರ್ತರನ್ನು ಕೊಂದಿದ್ದಾರೆ. ಮಹಿಳಾ ಸದಸ್ಯರ ಮೇಲೆ ಹಲ್ಲೆ ಮಾಡಿದ್ದಾರೆ. ಮನೆಗಳನ್ನು ಧ್ವಂಸ ಮಾಡಿದ್ದಾರೆ. ಸದಸ್ಯರ ಅಂಗಡಿಗಳನ್ನು ಲೂಟಿ ಮಾಡಿದ್ದಾರೆ‘ ಎಂದು ಬಿಜೆಪಿ ಆರೋಪಿಸಿದೆ.

ಮತದಾನೋತ್ತರ ಹಿಂಸಾಚಾರದಲ್ಲಿ ಕನಿಷ್ಠ 14 ಮಂದಿ ಬಿಜೆಪಿ ಕರ್ಯಕರ್ತರನ್ನು ಕೊಲ್ಲಲಾಗಿದೆ ಮತ್ತು ಒಂದು ಲಕ್ಷಕ್ಕೂ ಹೆಚ್ಚು ಮಂದಿ ಮನೆ ತೊರೆದಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಬುಧವಾರ ಆರೋಪಿಸಿದ್ದರು. ಹಿಂಸಾಚಾರ ಕುರಿತು ಮಮತಾ ಬ್ಯಾನರ್ಜಿ ಮೌನ ವಹಿಸಿರುವುದನ್ನು ನೋಡಿದರೆ ಈ ಕೃತ್ಯದಲ್ಲಿ ಅವರು ಭಾಗಿಯಾಗಿರುವುದು ಗೊತ್ತಾಗುತ್ತದೆ‘ ಎಂದು ನಡ್ಡಾ ಆರೋಪಿಸಿದ್ದರು. 

ಆದರೆ, ಮಮತಾ ಬ್ಯಾನರ್ಜಿ ಅವರು ಈ ಎಲ್ಲ ಆರೋಪಗಳನ್ನು ತಳ್ಳಿ ಹಾಕಿದ್ದರು. ಈ ಎಲ್ಲ ಹಿಂಸಾಚಾರ ಮತ್ತು ಸಂಘರ್ಷಗಳು ಬಿಜೆಪಿ ಗೆದ್ದಿರುವ ಕ್ಷೇತ್ರಗಳಲ್ಲೇ ನಡೆದಿವೆ ಎಂದು ಹೇಳಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು