ಗುರುವಾರ , ಫೆಬ್ರವರಿ 25, 2021
19 °C
ಕೋವಿಡ್‌–19 ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಗೃಹ ಸಚಿವಾಲಯ

ಚಿತ್ರಮಂದಿರಗಳಲ್ಲಿ ಹೆಚ್ಚಿನ ಪ್ರೇಕ್ಷಕರಿಗೆ ಅವಕಾಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು(ಎಂಎಚ್‌ಎ) ಬುಧವಾರ ಕೋವಿಡ್‌–19 ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಚಿತ್ರಮಂದಿರಗಳಲ್ಲಿ ಹೆಚ್ಚಿನ ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಜೊತೆಗೆ ಈಜುಕೊಳಗಳನ್ನೂ ತೆರೆಯಲು ಅನುಮತಿ ನೀಡಲಾಗಿದೆ. 

ಫೆ.1ರಿಂದ ಹೊಸ ಮಾರ್ಗಸೂಚಿಗಳು ಅನ್ವಯವಾಗಲಿದೆ. ಈಗಾಗಲೇ ಚಿತ್ರಮಂದಿರಗಳಲ್ಲಿ ಶೇ 50 ಸೀಟುಗಳ ಭರ್ತಿಗೆ ಅವಕಾಶ ನೀಡಲಾಗಿದೆ. ಇದೀಗ ಮತ್ತಷ್ಟು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಎಂಎಚ್‌ಎ ಜೊತೆ ಚರ್ಚಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಿದೆ’ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. 

ಕ್ರೀಡಾಳುಗಳಿಗೆ ಈಜುಕೊಳಗಳನ್ನು ಬಳಸಲು ಈಗಾಗಲೇ ಅನುಮತಿ ನೀಡಲಾಗಿದ್ದು, ಇದೀಗ ಎಲ್ಲರೂ ಈಜುಕೊಳ ಬಳಸಲು ಅನುಮತಿ ನೀಡಲಾಗಿದೆ. ಈ ಕುರಿತು ಕೇಂದ್ರ ಕ್ರೀಡಾ ಸಚಿವಾಲಯವು ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಿದೆ.

ಸೋಂಕು ದರ ಕುಸಿತ; ಜಾಗ್ರತೆ ಅಗತ್ಯ

ಕಳೆದ ನಾಲ್ಕು ತಿಂಗಳಿಂದ ದೇಶದಲ್ಲಿ ಸಕ್ರಿಯ ಮತ್ತು ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರ ಕುಸಿತ ಕಂಡುಬಂದಿದೆ. ಆದರೂ ಎಚ್ಚರಿಕೆ ಅಗತ್ಯ. ಅಗತ್ಯವಿದ್ದಲ್ಲಿ ಕಂಟೈನ್‌ಮೆಂಟ್ ವಲಯಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಸೂಕ್ಷ್ಮವಾಗಿ ಹಾಗೂ  ಎಚ್ಚರಿಕೆಯಿಂದ ಗುರುತಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಚಿವಾಲಯ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು.

ನಿಗದಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಸ್ಥಳೀಯ ಆಡಳಿತ, ಪೊಲೀಸ್ ಮತ್ತು ಪುರಸಭೆ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ. ಮಾಸ್ಕ್, ಕೈಗವಸು ಧರಿಸುವಿಕೆ, ಅಂತರ ಕಾಪಾಡಿಕೊಳ್ಳುವಿಕೆ ಮೊದಲಾದ ಕೋವಿಡ್ ತಡೆ ನಡವಳಿಕೆಗಳನ್ನು ಉತ್ತೇಜಿಸುವ ಜವಾಬ್ದಾರಿ ಆಯಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕರ್ತವ್ಯ ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು