ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಸ್ವರೂಪದ ವೈರಾಣು: ಎಚ್ಚರಿಕೆ ಅಗತ್ಯ

Last Updated 28 ಡಿಸೆಂಬರ್ 2020, 19:31 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಹಿನ್ನೆಲೆಯಲ್ಲಿ ಹಲವು ಚಟುವಟಿಕೆಗಳ ಮೇಲಿನ ನಿರ್ಬಂಧವನ್ನು ಮುಂದುವರಿಸಿರುವ ಕೇಂದ್ರ ಸರ್ಕಾರವು, ಭಾರತದಲ್ಲಿ ಕೋವಿಡ್‌–19 ಸಕ್ರಿಯ ಪ್ರಕರಣಗಳು ಇಳಿಕೆಯಾಗುತ್ತಿದ್ದರೂ ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಾಣು ಕಾಣಿಸಿಕೊಂಡಿರುವ ಕಾರಣ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ.

ಈಗಾಗಲೇ ಹೊರಡಿಸಲಾಗಿರುವ ಮಾರ್ಗಸೂಚಿಗಳು ಜ.31ರವರೆಗೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷದ ಆಚರಣೆ ಹಾಗೂ ಚಳಿಗಾಲದ ಸಂದರ್ಭದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗದಂತೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕಟ್ಟುನಿಟ್ಟಿನ ಎಚ್ಚರಿಕೆವಹಿಸಬೇಕು. ಲಸಿಕೆ ಅಭಿಯಾನಕ್ಕೆ ಕೇಂದ್ರದ ಅಧಿಕಾರಿಗಳು ಪ್ರಕ್ರಿಯೆ ಆರಂಭಿಸಿದ್ದು, ಸರ್ಕಾರಗಳು ಇವರಿಗೆ ಸೂಕ್ತ ಬೆಂಬಲ ನೀಡಬೇಕು ಎಂದು ಸೂಚಿಸಿದೆ.

‘ಕಂಟೈನ್‌ಮೆಂಟ್‌ ವಲಯಗಳಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ, ನಿರ್ಬಂಧ ಸಡಿಲಿಸಲಾಗಿರುವ ಚಟುವಟಿಕೆಗಳಿಗೆ ಸೂಚಿಸಲಾಗಿರುವ ಮಾರ್ಗಸೂಚಿಗಳನ್ನು ಸೂಕ್ತವಾಗಿ ಅನುಷ್ಠಾನಗೊಳಿಸಬೇಕು’ ಎಂದು ಕೇಂದ್ರ ಗೃಹ ಸಚಿವಾಲಯವು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT