ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ತ್ರಿವರ್ಣ ಧ್ವಜ ಬಳಸದಂತೆ ಕೇಂದ್ರ ಗೃಹ ಸಚಿವಾಲಯದ ಸೂಚನೆ

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನ
Last Updated 8 ಆಗಸ್ಟ್ 2021, 15:06 IST
ಅಕ್ಷರ ಗಾತ್ರ

ನವದೆಹಲಿ: ‘ಜೈವಿಕವಾಗಿ ವಿಘಟನೆ ಮಾಡಲು ಸಾಧ್ಯವಾಗದೇ ಇರುವ ಕಾರಣ ಸಾರ್ವಜನಿಕರು ಪ್ಲಾಸ್ಟಿಕ್‌ನ ತ್ರಿವರ್ಣ ಧ್ವಜವನ್ನು ಬಳಸದಂತೆ ಎಚ್ಚರ ವಹಿಸಬೇಕು’ ಎಂದು ಕೇಂದ್ರ ಗೃಹ ಸಚಿವಾಲಯವು ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

‘ರಾಷ್ಟ್ರಧ್ವಜವು ದೇಶದ ಜನರ ಭರವಸೆ ಮತ್ತು ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತದೆ. ಹಾಗಾಗಿ, ಅದು ಗೌರವದ ಸ್ಥಾನವನ್ನು ಪಡೆದುಕೊಂಡಿದೆ. ಆದರೆ, ರಾಷ್ಟ್ರಧ್ವಜವನ್ನು ಪ್ರದರ್ಶಿಸುವ ಕುರಿತು ಇರುವ ಕಾನೂನು, ಆಚರಣೆ ಮತ್ತು ಸಂಪ್ರದಾಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ಸರ್ಕಾರದ ಸಂಸ್ಥೆಗಳಲ್ಲಿ ಅರಿವಿನ ಕೊರತೆ ಇದೆ. ಪ್ಲಾಸ್ಟಿಕ್‌ನ ಧ್ವಜಗಳು ಕಾಗದದ ಧ್ವಜಗಳಂತೆ ಜೈವಿಕವಾಗಿ ವಿಘಟನೆಯಾಗುವುದಿಲ್ಲ. ಇವು ದೀರ್ಘಕಾಲದವರೆಗೂ ಕೊಳೆಯುವುದಿಲ್ಲ. ಹಾಗಾಗಿ, ಪ್ಲಾಸ್ಟಿಕ್ ತ್ರಿವರ್ಣ ಧ್ವಜ ಬಳಸದಂತೆ ಎಚ್ಚರ ವಹಿಸುವುದು ಸೂಕ್ತ’ ಎಂದು ಸಚಿವಾಲಯವು ಹೇಳಿದೆ.

‘ಒಂದು ವೇಳೆ ಪ್ಲಾಸ್ಟಿಕ್ ತ್ರಿವರ್ಣ ಧ್ವಜ ಬಳಸಿದರೆ, ಇವುಗಳ ಸೂಕ್ತ ವಿಲೇವಾರಿ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ಪ್ರಾಯೋಗಿಕವಾಗಿ ಸಮಸ್ಯೆಯಾಗಿದೆ. ಆದ್ದರಿಂದ, ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳ ಸಂದರ್ಭಗಳಲ್ಲಿ, ‘ಭಾರತದ ಧ್ವಜ ಸಂಹಿತೆ– 2002’ ಮತ್ತು ನಿಬಂಧನೆಗಳ ಪ್ರಕಾರ ಕಾಗದದ ತ್ರಿವರ್ಣ ಧ್ವಜಗಳನ್ನು ಮಾತ್ರ ಸಾರ್ವಜನಿಕರು ಬಳಸುತ್ತಾರೆ ಎನ್ನುವ ಕುರಿತು ಖಚಿತಪಡಿಸಿಕೊಳ್ಳಬೇಕು’ ಎಂದೂ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT