ಮಂಗಳವಾರ, ಜನವರಿ 26, 2021
24 °C

ಮಿಗ್‌–29ಕೆ ತರಬೇತಿ ವಿಮಾನ ಪತನ; ಪೈಲಟ್‌ ನಾಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಮಿಗ್– ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತೀಯ ನೌಕಾಪಡೆಯ ಮಿಗ್‌–29ಕೆ ತರಬೇತಿ ವಿಮಾನವು ಗುರುವಾರ ಸಂಜೆ ಪತನಗೊಂಡಿದ್ದು, ಒಬ್ಬ ಪೈಲಟ್‌ ಅನ್ನು ರಕ್ಷಿಸಲಾಗಿದೆ. ಇನ್ನೊಬ್ಬರಿಗಾಗಿ ಶೋಧ ಮುಂದುವರಿದಿದೆ ಎಂದು ನೌಕಾಪಡೆಯ ಅಧಿಕಾರಿಗಳು ಶುಕ್ರವಾರ ತಿಳಿಸಿದರು.

ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಅರಬ್ಬಿ ಸಮುದ್ರದ ಮೇಲೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು.

ನಾಪತ್ತೆಯಾಗಿರುವ ಪೈಲಟ್‌ ಅನ್ನು ಪತ್ತೆ ಹಚ್ಚಲು ಗಸ್ತು ವಿಮಾನ ಮತ್ತು ಹಡಗನ್ನು ನಿಯೋಜಿಸಲಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು