ಶನಿವಾರ, ಮಾರ್ಚ್ 25, 2023
28 °C

ಗುಜರಾತ್‌: ಕಛ್‌ ಜಿಲ್ಲೆಯಲ್ಲಿ ಲಘು ಭೂಕಂಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ಕೊರೊನಾ ಸೋಂಕಿನ ಆತಂಕದ ನಡುವೆ, ಗುಜರಾತ್‌ನ ಕಛ್‌ ಜಿಲ್ಲೆಯ ಕೆಲವೆಡೆ ಭಾನುವಾರ ಬೆಳಿಗ್ಗೆ ಭೂಕಂಪ ಸಂಭವಿಸಿದೆ.

ಬೆಳಿಗ್ಗೆ 7.40ರ ವೇಳೆಗಯಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 3.7 ತೀವ್ರತೆ ದಾಖಲಾಗಿದೆ ಎಂದು ಗಾಂಧಿನಗರದ ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ ದೃಢಪಡಿಸಿದೆ. ಯಾವುದೇ ಸಾವು–ನೋವು ಸಂಭವಿಸಿದ ವರದಿಯಾಗಿಲ್ಲ.

ಕಛ್‌ ಜಿಲ್ಲೆಯ ದುಧೈ ಈಶಾನ್ಯ ದಿಕ್ಕಿನಲ್ಲಿ 19 ಕಿ.ಮೀ ದೂರದಲ್ಲಿ, 11.8 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಕಛ್‌ ಜಿಲ್ಲೆ ಅತಿ ಹೆಚ್ಚು ಅಪಾಯದ ಭೂಕಂಪನ ವಲಯವಾಗಿದ್ದು, 2001 ರ ಜನವರಿಯಲ್ಲಿ ಜಿಲ್ಲೆಯಲ್ಲಿ 6.9 ತೀವ್ರತೆಯ ಭೂಕಂಪ ಸಂಭವಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು