ಗುರುವಾರ , ಜನವರಿ 20, 2022
15 °C

ಜಮ್ಮು–ಕಾಶ್ಮೀರ: ನಾಗರಿಕರ ಕೊಲೆಯಲ್ಲಿ ಭಾಗಿಯಾಗಿದ್ದ ಉಗ್ರನ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಇತ್ತೀಚಿಗೆ ಶ್ರೀನಗರದಲ್ಲಿ ನಡೆದ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನೊಬ್ಬನನ್ನು ಜಮ್ಮು–ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮದ ವಹೀಬಗ್‌ ಪ್ರದೇಶದಲ್ಲಿಯ ಕಾವಲು ಬೇಲಿ ಬಳಿ ಉಗ್ರರು ಇರುವ ಬಗ್ಗೆ ಭದ್ರತಾ ಪಡೆಗಳು ಮಾಹಿತಿ ಪಡೆದಿವೆ.

ಬಳಿಕ ಅಲ್ಲಿ ಶೋಧ ಕಾರ್ಯಾಚರಣೆ ನಡೆಸಿವೆ. ಕ್ರಮೇಣ ಇದು ಎನ್‌ಕೌಂಟರ್‌ ಆಗಿ ಬದಲಾಗಿದೆ. ಈ ವೇಳೆ ಭದ್ರತಾ ಅಧಿಕಾರಿಗಳು ಹಾರಿಸಿದ ಗುಂಡಿಗೆ ಒಬ್ಬ ಉಗ್ರ ಬಲಿಯಾಗಿದ್ದಾನೆ. ಉಗ್ರನನ್ನು ಶ್ರೀನಗರದ ನಿವಾಸಿ ಶಾಹಿದ್‌ ಬಶೀರ್‌ ಶೇಖ್‌ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದರು.   

ಎನ್‌ಕೌಂಟರ್‌ ನಡೆದ ಸ್ಥಳದಿಂದ ಒಂದು ಎಕೆ–47 ಬಂದೂಕು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

‘ಪುಲ್ವಾಮದಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಶ್ರೀನಗರದಲ್ಲಿಯ ಇತ್ತೀಚಿನ ನಾಗರಿಕ ಹತ್ಯೆಯಲ್ಲಿ ಭಾಗಿಯಾಗಿದ್ದ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ’ ಎಂದು ಕಾಶ್ಮೀರದ ಐಜಿಪಿ ವಿಜಯ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು