ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಅಪರಿಚಿತ ಉಗ್ರನೊಬ್ಬ ಮೃತಪಟ್ಟಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಲಭ್ಯವಾಗಿರುವ ಮೇರೆಗೆ ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ಕನಿಗಾಮ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಭದ್ರತಾ ಪಡೆಗಳು ಶೋಧ ನಡೆಸುತ್ತಿರುವಾಗ ಅವರ ಮೇಲೆ ಉಗ್ರರು ಏಕಾಏಕಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದೇ ವೇಳೆ ಭದ್ರತಾ ಪಡೆಗಳು ಕೂಡ ಪ್ರತೀಕಾರ ತೀರಿಸಿಕೊಂಡವು, ಇದರ ಪರಿಣಾಮವಾಗಿ ಓರ್ವ ಉಗ್ರನನ್ನು ಎನ್‌ಕೌಂಟರ್ ಮಾಡಲಾಗಿದೆ. ಹತ್ಯೆಗೀಡಾದ ಉಗ್ರನ ಗುರುತು ಮತ್ತು ಆತ ಯಾವ ಗುಂಪಿಗೆ ಸೇರಿದ್ದಾನೆ ಎಂಬುದನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅವರು ಹೇಳಿದರು.
ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು, ಅವರನ್ನು ಕೂಡಲೇ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.