ಶನಿವಾರ, 27 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರಾಮುಲ್ಲಾದ ಗಡಿ ನಿಯಂತ್ರಣ ರೇಖೆ ಬಳಿ ಉಗ್ರನ ಹತ್ಯೆ, 3 ಯೋಧರಿಗೆ ಗಾಯ

Last Updated 27 ಸೆಪ್ಟೆಂಬರ್ 2021, 16:56 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನೆ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದು, ಈ ವೇಳೆ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಅನುಮಾನಾಸ್ಪದ ಚಲನವಲನ ಕಂಡುಬಂದ ನಂತರ ಉತ್ತರ ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆಯು ಒಳನುಸುಳುವಿಕೆ ತಡೆ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅವರು ಹೇಳಿದರು.

'ಉರಿಯಲ್ಲಿನ ಎಲ್‌ಒಸಿಯಲ್ಲಿ ನುಸುಳುಕೋರರು ನಡೆಸಿದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡರೆ, ಒಬ್ಬ ನುಸುಳುಕೋರನನ್ನು ಹೊಡೆದುರುಳಿಸಲಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಒಳನುಸುಳುವಿಕೆ ತಡೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ. ಇದು ಗುಂಡಿನ ಚಕಮಕಿಗೆ ಕಾರಣವಾಯಿತು' ಎಂದು ಅವರು ಹೇಳಿದರು.

ಕಳೆದ ಎರಡು ದಿನಗಳಿಂದ ಉಭಯ ದೇಶಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಈ ಭಾಗದಲ್ಲಿ ಒಳನುಸುಳುತ್ತಿರುವ ಭಯೋತ್ಪಾದಕರನ್ನು ತಡೆಯಲು ಆ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT