ಬುಧವಾರ, ಅಕ್ಟೋಬರ್ 21, 2020
21 °C

ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಒಬ್ಬ ಉಗ್ರ ಹತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯು ಉಗ್ರನೊಬ್ಬನನ್ನು ಹೊಡೆದುರುಳಿಸಿದೆ ಎಂದು ಸೇನೆ ತಿಳಿಸಿದೆ.

ನಿಖರ ಮಾಹಿತಿ ಮೇರೆಗೆ ಸೇನೆಯು ಅನಂತನಾಗ್‌ ಜಿಲ್ಲೆಯ ಲಾರ್ನೊ ಪ್ರಾಂತ್ಯದಲ್ಲಿ ಶನಿವಾರ ಶೋಧ ಕಾರ್ಯಾಚರಣೆ ನಡೆಸುವಾಗ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಮೊದಲು ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಸೇನೆ ದಾಳಿ ನಡೆಸಿದೆ ಎಂದು ಅವರು ಮಾಹಿತಿ ನೀಡಿದರು.

ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. ಸ್ಥಳದಿಂದ ಒಂದು ಎ.ಕೆ ರೈಫಲ್‌ ಅನ್ನು ವಶಕ್ಕೆ ಪಡೆಯಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು