ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರನ ಹತ್ಯೆ: ಅಮೆರಿಕ ರೈಫಲ್‌ ವಶಕ್ಕೆ

Last Updated 14 ಮಾರ್ಚ್ 2021, 21:33 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನೊಬ್ಬನನ್ನು ಕೊಂದಿರುವ ಭದ್ರತಾ ಪಡೆಗಳು, ಅಮೆರಿಕ ತಯಾರಿಸಿರುವ ರೈಫಲ್‌ ಮತ್ತು 36 ಗುಂಡುಗಳನ್ನು ಭಾನುವಾರ ವಶಪಡಿಸಿಕೊಂಡಿವೆ.

ಈ ಕುರಿತು ಸೇನೆಯು ತನ್ನ ಅಧಿಕೃತ ಟ್ವಿಟರ್‌ನಲ್ಲಿ ಪ್ರಕಟಿಸಿದ್ದು, ಎನ್‌ಕೌಂಟರ್‌ ಸ್ಥಳದಲ್ಲಿ ₹9,600 ನಗದು ಸಹ ವಶಪಡಿಸಿಕೊಂಡಿರುವುದಾಗಿ ತಿಳಿಸಿದೆ.

ಜೈಶ್‌ ಎ ಮೊಹಮ್ಮದ್‌ (ಜೆಇಎಂ) ಉನ್ನತ ಕಮಾಂಡರ್‌ ಸಜ್ಜಾದ್‌ ಅಫ್ಘಾನಿ ಮತ್ತು ವಿದೇಶಿ ಉಗ್ರರು ಇರುವ ಮಾಹಿತಿ ದೊರೆಯುತ್ತಿದ್ದಂತೆ ಶನಿವಾರ ಸಂಜೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದವು. ರಾತ್ರಿ ಸಮಯದಲ್ಲಿ ಕಾರ್ಯಾಚರಣೆ ಬಂದ್‌ ಮಾಡಲಾಗಿತ್ತು. ಉಗ್ರರು ಪರಾರಿಯಾಗದಂತೆ ತಡೆಯಲು ಗ್ರಾಮದ ಸುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಭದ್ರತಾ ಪಡೆಗಳ ಶೋಧ ಕಾರ್ಯಾಚರಣೆಗೆ ಮಾಹಿತಿ ನೀಡಲು ಬಂದಿದ್ದ ಐವರು ಗ್ರಾಮಸ್ಥರು ಉಗ್ರರಿರುವ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದರಿಂದ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಗ್ರಾಮಸ್ಥರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ’ ಎಂದು ಕಾಶ್ಮೀರದ ಪೊಲೀಸ್‌ ಮಹಾನಿರೀಕ್ಷಕ ವಿಜಯ್‌ ಕುಮಾರ್‌ ಹೇಳಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಉಗ್ರ ಸಜ್ಜಾದ್‌ ಅಫ್ಘಾನಿ ಎಂಬುದು ದೃಢಪಟ್ಟಿಲ್ಲ. ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT