ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆ: ಎನ್‌ಕೌಂಟರ್‌ನಲ್ಲಿ ಉಗ್ರ ಹತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನೊಬ್ಬ ಹತ್ಯೆಯಾಗಿದ್ದಾನೆ.
‘ವಗೂರಾ ಪ್ರದೇಶದಲ್ಲಿ ಉಗ್ರರು ಇರುವ ಮಾಹಿತಿ ಆಧರಿಸಿ ಭದ್ರತಾ ಪಡೆಯು ಮಂಗಳವಾರ ತಡರಾತ್ರಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.
‘ಉಗ್ರರಿಗಾಗಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ’ ಎಂದು ಅವರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.