ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮ ಬಳಿ ಎನ್‌ಕೌಂಟರ್‌: ಉಗ್ರ ಬಲಿ

Last Updated 24 ಸೆಪ್ಟೆಂಬರ್ 2020, 5:39 IST
ಅಕ್ಷರ ಗಾತ್ರ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಟ್ರಾಲ್‌ ಪ್ರದೇಶದ ಬಳಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಎನ್‌ಕೌಂಟರ್‌ ನಡೆದಿದೆ ಎಂದು ಪೊಲೀಸರ್ ಅಧಿಕಾರಿ ಹೇಳಿದ್ದಾರೆ.

ಈ ವೇಳೆ ಒಬ್ಬ ಉಗ್ರ ಹತನಾಗಿದ್ದಾನೆ. ಕಾರ್ಯಾಚರಣೆ ಮುಂದುವರೆದಿದೆ. ಹತನಾದ ಉಗ್ರನ ಗುರುತು ಮತ್ತು ಆತ ಯಾವ ಉಗ್ರಗಾಮಿ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದ ಎಂಬುದರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT