ಶ್ರೀನಗರದಲ್ಲಿ ಎನ್‌ಕೌಂಟರ್‌ಗೆ ಉಗ್ರ ಬಲಿ

ಶ್ರೀನಗರ (ಜಮ್ಮು ಕಾಶ್ಮೀರ): ಶ್ರೀನಗರದಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ನಗರದ ಹರ್ವಾನ್ ಪ್ರದೇಶದಲ್ಲಿ ಶನಿವಾರ ರಾತ್ರಿ ಎನ್‌ಕೌಂಟರ್ ನಡೆದಿದೆ ಎಂದು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ಸ್ಪಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ನಗರದ ಹರ್ವಾನ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆಗೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದ ಉಗ್ರನ ಗುರುತು ಪತ್ತೆಯಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.
One unidentified terrorist neutralized in the encounter that broke out between security forces and terrorists at Harwan area of Srinagar: Kashmir Zone Police
— ANI (@ANI) December 18, 2021
An encounter broke out between security forces and terrorists in Harwan area of Srinagar, early this morning; 1 unidentified terrorist neutralized.
(Visuals deferred by unspecified time) pic.twitter.com/wuf1OuNJLv
— ANI (@ANI) December 19, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.