ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ ಒಳನುಸುಳುವಿಕೆಗೆ ಪ್ರಯತ್ನಿಸಿದ್ದ ಓರ್ವ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಡರಾತ್ರಿ ಕುಪ್ವಾರ ಪೊಲೀಸರಿಗೆ ಲಭಿಸಿದ ನಿಖರ ಮಾಹಿತಿ ಆಧಾರದ ಮೇಲೆ ಜಂಟಿ ಸೇನಾ ತಂಡ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ, ಸೈದಾಪುರ ಪ್ರದೇಶದಲ್ಲಿ ಓರ್ವ ಉಗ್ರಗಾಮಿಯನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಟ್ಟೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಆ ಪ್ರದೇಶದಲ್ಲಿ ಸಂಶೋಧನಾ ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.