ಶ್ರೀನಗರ: ನಗರದ ನೌಗಮ್ ಪ್ರದೇಶದಲ್ಲಿನ ಬಿಜೆಪಿ ಮುಖಂಡರ ನಿವಾಸದ ಮೇಲೆ ಗುರುವಾರ ಬೆಳಿಗ್ಗೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಮೃತಪಟ್ಟಿದ್ದಾರೆ.

ಬಾರಾಮುಲ್ಲಾದಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮತ್ತು ಕುಪ್ವಾರಾ ಜಿಲ್ಲೆಯ ಉಸ್ತುವಾರಿ ಆಗಿರುವ ಮುಖಂಡ ಅನ್ವರ್ ಅಹ್ಮದ್ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕಾನ್‌ಸ್ಟೆಬಲ್ ರಮೀಜ್ ರಾಜಾ ಅವರನ್ನು ನಗರದ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಅವರು, ಆಸ್ಪತ್ರೆಗೆ ಬರುವ ಮೊದಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಉಗ್ರರ ಈ ದಾಳಿಯನ್ನು ಬಿಜೆಪಿಯ ಕಾಶ್ಮೀರ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಮಾಧ್ಯಮ ಉಸ್ತುವಾರಿ ಮಂಜೂರ್ ಭಟ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.