ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಂತನಾಗ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಸಾವು

Last Updated 25 ಸೆಪ್ಟೆಂಬರ್ 2020, 7:24 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್ ಎ ತೊಯಬಾ (ಎಲ್ಇಟಿ) ಸಂಘಟನೆಯ ಇಬ್ಬರು ಉಗ್ರರು ಹತರಾಗಿದ್ದಾರೆ.

ಉಗ್ರರು ಸಿರ್ಹಾಮಾ ಪ್ರದೇಶದಲ್ಲಿ ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಕೈಗೊಂಡಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರು ಗುಂಡು ಹಾರಿಸಿದಾಗ, ಭದ್ರತಾ ಪಡೆಗಳು ಪ್ರತಿಯಾಗಿ ಗುಂಡು ಹಾರಿಸಿದ್ದವು. ಈ ಚಕಮಕಿಯಲ್ಲಿ ಇಬ್ಬರು ಉಗ್ರರು ಸತ್ತಿದ್ದಾರೆ. ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT