ಶನಿವಾರ, ಮಾರ್ಚ್ 25, 2023
25 °C

ಜಮ್ಮು– ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು– ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ರಾಣಿಪೋರಾ ಪ್ರದೇಶದ ಕ್ವಾರಿಗಂನಲ್ಲಿ ಭದ್ರತಾ ಪಡೆಗಳು ಕೈಗೊಂಡಿದ್ದ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಅಡಗಿರುವ ಮಾಹಿತಿ ದೊರೆತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಕಾರ್ಯ ನಡೆಯುತ್ತಿರುವಾಗಲೇ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ಪ್ರತೀಕಾರವಾಗಿ ನಡೆಸಿದ ದಾಳಿಯಲ್ಲಿ ಇಬ್ಬರು ಉಗ್ರರು ಸಾವಿಗೀಡಾದರು. ಉಗ್ರರ ಗುರುತು ಪತ್ತೆ ಹಚ್ಚುವ ಕಾರ್ಯ ಕೈಗೊಳ್ಳಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು