ಶ್ರೀನಗರ: ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.
ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಪಿಯಾನ್ ಜಿಲ್ಲೆಯ ಚಕುರಾ ಪ್ರದೇಶದಲ್ಲಿ ಶೋಧ ಕಾರ್ಯಾಚಾರಣೆ ನಡೆಸಿದ್ದಾರೆ.
ಉಗ್ರರಿಗಾಗಿ ನಡೆಸುತ್ತಿದ್ದ ಶೋಧ ಕಾರ್ಯ, ಒಂದು ಹಂತದಲ್ಲಿ ಎನ್‌ಕೌಂಟರ್‌ಗೆ ತಿರುಗಿತು. ಭದ್ರತಾ ಪಡೆಗಳು ಉಗ್ರರ ಗುಂಪಿನತ್ತ ಗುಂಡು ಹಾರಿಸಿದರು.
‘ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಹತ್ಯೆಯಾದ ಉಗ್ರರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ‘ ಎಂದುಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.