ಉಗ್ರರ ದಾಳಿ: ಪಂಜಾಬ್‌ನ ಚಾಲಕನಿಗೆ ಗಾಯ
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಯಾದರ್ ಪ್ರದೇಶದಲ್ಲಿ ಗುರುವಾರ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಹೊರ ರಾಜ್ಯದ ಚಾಲಕರೊಬ್ಬರು ಗಾಯಗೊಂಡಿದ್ದಾರೆ.
ಸೋನು ಶರ್ಮಾ ಗಾಯಗೊಂಡ ಚಾಲಕ. ಸೋನು ಅವರು ಪಂಜಾಬ್‌ನ ಪಠಣ್‌ಕೋಟ್‌ನ ನಿವಾಸಿ. ‘ಗಾಯಗೊಂಡ ಸೋನು ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ದಾಳಿಯ ನಂತರ ಉಗ್ರರ ವಿರುದ್ಧ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಇಡೀ ಪ್ರದೇಶವನ್ನು ಸುತ್ತುವರೆದಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಕೆಲ ದಿನಗಳಿಂದ ಕಾಶ್ಮೀರದಲ್ಲಿ ಅದರಲ್ಲೂ ವಿಶೇಷವಾಗಿ ಪುಲ್ವಾಮಾ ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ಮೇಲೆ ದಾಳಿಗಳು ಹೆಚ್ಚಾಗಿದ್ದು, ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಮೂರು ಪ್ರತ್ಯೇಕ ದಾಳಿಗಳಲ್ಲಿ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.