ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ-ಪಾಕಿಸ್ತಾನ ಮಧ್ಯೆ ಭಯೋತ್ಪಾದನೆ ನಿಗ್ರಹ ಸಹಕಾರ ಹೆಚ್ಚಳಕ್ಕೆ ಸಮ್ಮತಿ

Last Updated 13 ಜೂನ್ 2022, 13:58 IST
ಅಕ್ಷರ ಗಾತ್ರ

ಇಸ್ಲಾಮಾಬಾದ್/ಬೀಜಿಂಗ್(ಪಿಟಿಐ): ಚೀನಾ ಮತ್ತು ಪಾಕಿಸ್ತಾನ ದೇಶಗಳು ಭಯೋತ್ಪಾದನೆ ನಿಗ್ರಹಕ್ಕೆ ಸಹಕಾರ ಮತ್ತು ರಕ್ಷಣೆಯನ್ನು ಹೆಚ್ಚಿಸಿಕೊಳ್ಳಲು ಒಪ್ಪಿಗೆ ಸೂಚಿಸಿವೆ. ಉಭಯ ದೇಶಗಳ ನಡುವಿನ ಭದ್ರತೆಗೆ ಸಂಬಂಧಿಸಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಖ್ವಾಮರ್ ಜಾವೇದ್ ಬಾಜ್ವಾ ಅವರು ಚೀನಾ ಸೇನಾ ನಾಯಕತ್ವದ ಜೊತೆ ಮಾತುಕತೆ ನಡೆಸಿದರು.

ಪೂರ್ವ ಚೀನಾದ ಶಾಂಡಾಂಗ್ ಪ್ರಾಂತ್ಯದಲ್ಲಿ ಭಾನುವಾರ ನಡೆದ ಉಭಯ ದೇಶಗಳ ನಡುವಿನ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನದ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.ಈ ಸಭೆಯಲ್ಲಿ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ಭದ್ರತೆ ಪರಿಸ್ಥಿತಿ ಬಗ್ಗೆ ಚರ್ಚಿಸಲಾಗಿದ್ದು, ಉಭಯ ದೇಶಗಳ ನಡುವಿನ ಭದ್ರತೆ ಸಹಕಾರದ ಬಗ್ಗೆ ತೃಪ್ತಿ ವ್ಯಕ್ತವಾಗಿದೆ ಎಂದು ಎರಡೂ ದೇಶಗಳು ಹೇಳಿಕೆ ಬಿಡುಗಡೆ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT