ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿಗಾರಿಕೆ ಗುತ್ತಿಗೆ ಅಕ್ರಮ: ಹೈಕೋರ್ಟ್‌ ತೀರ್ಪು ಅಮಾನ್ಯಗೊಳಿಸಿದ ‘ಸುಪ್ರೀಂ’

Last Updated 7 ನವೆಂಬರ್ 2022, 11:29 IST
ಅಕ್ಷರ ಗಾತ್ರ

ನವದೆಹಲಿ: ಗಣಿಗಾರಿಕೆಗುತ್ತಿಗೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ(ಐಪಿಎಲ್‌) ವಿರುದ್ಧ ಜಾರ್ಖಂಡ್‌ ಸರ್ಕಾರ ಮತ್ತು ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ಸ್ವೀಕರಿಸಿದೆ. ಈ ಅರ್ಜಿಗಳ ವಿಚಾರಣಾಯೋಗ್ಯತೆಯನ್ನು ಎತ್ತಿಹಿಡಿದು ತೀರ್ಪು ನೀಡಿದ್ದ ಜಾರ್ಖಂಡ್‌ ಹೈಕೋರ್ಟ್‌ನ ಆದೇಶವನ್ನು ಸುಪ್ರಿಂ ಕೋರ್ಟ್‌ ಅಮಾನ್ಯಗೊಳಿಸಿದೆ.

‘ಪಿಐಎಲ್‌ಗಳನ್ನು ವಿರೋಧಿಸಿ ಹೇಮಂತ್‌ ಸೊರೆನ್‌ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸ್ವೀಕರಿಸಲಾಯಿತು ಮತ್ತು ಜೂನ್ 3ರ ಹೈಕೋರ್ಟ್‌ ತೀರ್ಪನ್ನು ಅಮಾನ್ಯಗೊಳಿಸಲಾಯಿತು’ ಎಂದು ಕೋರ್ಟ್‌ ಹೇಳಿದೆ.

ಈ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಹೊರಬೀಳುತ್ತಿದ್ದಂತೆ ಸಂಭ್ರಮ ವ್ಯಕ್ತಪಡಿಸಿದ ಹೇಮಂತ್‌ ಅವರು, ‘ಸತ್ಯಮೇವ ಜಯತೇ’ ಎಂದು ಟ್ವೀಟ್‌ ಮಾಡಿದ್ದಾರೆ.

ಜಾರ್ಖಂಡ್‌ನ ಗಣಿಗಾರಿಕೆ ಸಚಿವರೂ ಅಗಿರುವ ಹೇಮಂತ್‌ ಅವರು ಅಕ್ರಮವಾಗಿ ತಮಗೆ ತಾವೇ ಗಣಿಗಾರಿಕೆ ಗುತ್ತಿಗೆ ಜಾರಿ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಅವರ ವಿರುದ್ಧ ವಿಚಾರಣೆ ನಡೆಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆ ಆಗಿದ್ದವು. ಅರ್ಜಿಗಳ ವಿಚಾರಣಾ ಯೋಗ್ಯತೆಯನ್ನು ಎತ್ತಿಹಿಡಿದು ಜಾರ್ಖಂಡ್‌ ಹೈಕೋರ್ಟ್‌ ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT