ಶುಕ್ರವಾರ, ಮಾರ್ಚ್ 31, 2023
22 °C

ಉಪರಾಷ್ಟ್ರಪತಿಯನ್ನು ಭೇಟಿಯಾದ ಸುಮಲತಾ; ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಂಡ್ಯ ಸಂಸದೆ ಸುಮಲತಾ ಅವರು ಶುಕ್ರವಾರ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ, ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ಚಟುವಟಿಕೆಗಳ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಅತಿಯಾಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ಎದುರಾಗಿದೆ. ಅಲ್ಲದೆ ಬಂಡೀಪುರ, ನಾಗರಹೊಳೆಯ ವನ್ಯಜೀವಿ ಅಭಯಾರಣ್ಯಗಳಿಗೂ ಸಂಕಷ್ಟ ಎದುರಾಗುವಂತೆ ಮಾಡಿವೆ. ಕಾವೇರಿ ನದಿಯನ್ನೂ ಇದು ಕಲುಷಿತಗೊಳಿಸಿದೆ ಎಂದು ಅವರು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು