ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲವ್‌ ಜಿಹಾದ್ ನಿರ್ಬಂಧ ಕಾನೂನು ರಾಷ್ಟ್ರಮಟ್ಟದಲ್ಲಿ ಜಾರಿ ಇಲ್ಲ: ಕಿಶನ್ ರೆಡ್ಡಿ

Last Updated 2 ಫೆಬ್ರುವರಿ 2021, 15:34 IST
ಅಕ್ಷರ ಗಾತ್ರ

ನವದೆಹಲಿ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ವಿವಾದಾತ್ಮಕ ‘ಲವ್‌ ಜಿಹಾದ್’ ನಿರ್ಬಂಧಿಸುವ ಕಾನೂನುಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ, ಈ ಕಾನೂನನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಮಂಗಳವಾರ ಹೇಳಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರಾದ ಟಿ.ಎನ್. ಪ್ರತಾಪನ್, ಆಂಟೋ ಆಂಟನಿ, ಕೆ. ಸುಧಾಕರನ್, ಎ. ಚಲ್ಲಕುಮಾರ್ ಮತ್ತು ಮೊಹಮ್ಮದ್ ಜಾವೇದ್ ಅವರು ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ನೀಡಿದ ಲಿಖಿತ ಉತ್ತರದಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ.

‘ದೇಶದ ಸಂವಿಧಾನದ ಏಳನೇ ಪರಿಚ್ಚೇಧದ ಪ್ರಕಾರ ಕಾನೂನು ಸುವ್ಯವಸ್ಥೆ ಮತ್ತು ಪೊಲೀಸ್‌ ರಾಜ್ಯ ವಿಷಯಗಳಾಗಿವೆ. ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದ ಅಪರಾಧಗಳ ತಡೆಗಟ್ಟುವಿಕೆ, ಪತ್ತೆ, ನೋಂದಣಿ, ತನಿಖೆ ಮತ್ತು ಕಾನೂನು ಕ್ರಮಗಳು ಮುಖ್ಯವಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದ್ದಾಗಿದೆ. ಕಾನೂನುಗಳು ಉಲ್ಲಂಘನೆಯಾದಲ್ಲಿ ಕಾನೂನು ಜಾರಿ ಸಂಸ್ಥೆಗಳು ಅಸ್ತಿತ್ವದಲ್ಲಿರುವ ಕಾನೂನುಗಳ ಪ್ರಕಾರವೇ ಕ್ರಮ ಕೈಗೊಳ್ಳುತ್ತಿವೆ’ ಎಂದು ರೆಡ್ಡಿ ಹೇಳಿದರು.

ಅಂತರ್‌ಧರ್ಮೀಯ ವಿವಾಹಗಳನ್ನು ನಿರ್ಬಂಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತಾಂತರ ವಿರೋಧಿ ಕಾನೂನು ಜಾರಿಗೆ ತರಲು ಹೊರಟಿದೆಯೇ ಎನ್ನುವ ಪ್ರಶ್ನೆಗೆ, ಸಚಿವರು ‘ಇಲ್ಲ’ ಎಂದು ಉತ್ತರಿಸಿದರು.

ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಬಿಜೆಪಿ ಆಡಳಿತ ಇರುವ ಕೆಲವು ರಾಜ್ಯಗಳು ಈಚೆಗೆ ಜಾರಿಗೆ ತಂದ ಮತಾಂತರ ವಿರೋಧಿ ಕಾನೂನುಗಳು ಮುಸ್ಲಿಮರನ್ನು ಗುರಿಯಾಗಿಸಿ ತಂದಿವೆ ಎನ್ನುವ ಆರೋಪಗಳು ಕೇಳಿಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT