ಶನಿವಾರ, ಅಕ್ಟೋಬರ್ 23, 2021
24 °C

ರಾಷ್ಟ್ರವ್ಯಾಪಿ ಕಾನೂನು ಅರಿವು ಅಭಿಯಾನ ಆರಂಭಿಸಿದ ಕೇಂದ್ರ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಹೊಸದಿಲ್ಲಿ: ಸಾಮಾನ್ಯ ಜನರಿಗೆ ನ್ಯಾಯದ ಮಹತ್ವ ತಿಳಿಸಲು ರಾಷ್ಟ್ರವ್ಯಾಪಿ ಕಾನೂನು ಅರಿವು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, 'ಸಾಮಾನ್ಯ ಜನರಿಗೆ ನ್ಯಾಯವನ್ನು ಹತ್ತಿರವಾಗಿಸಲು ರಾಷ್ಟ್ರವ್ಯಾಪಿ ಕಾನೂನು ಅರಿವು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಸಾಮಾನ್ಯ ಜನರ ಹಕ್ಕುಗಳು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್‌.ಎ.ಎಲ್‌.ಎಸ್‌.ಎ) ಮೊಬೈಲ್ ಅಪ್ಲಿಕೇಶನ್, ಅಪ್ಲಿಕೇಶನ್‌ನಲ್ಲಿರುವ ಪ್ರಮುಖ ಲಕ್ಷಣಗಳು ಮತ್ತು ಸಂತ್ರಸ್ತರಿಗೆ ಪರಿಹಾರ ಯೋಜನೆಗಳ ಮೇಲೆ ಬೆಳಕು ಚೆಲ್ಲುವ ಅಭಿಯಾನ ಇದಾಗಿದೆ' ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಇದನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರ ವರೆಗೆ ದೇಶದಾದ್ಯಂತ ಈ ಅಭಿಯಾನವು ನಡೆಯಲಿದೆ.

ದೇಶದ 50,000 ಗ್ರಾಮ ಪಂಚಾಯಿತಿಗಳಲ್ಲಿನ 51,434 ಸಾಮಾನ್ಯ ಸೇವಾ ಕೇಂದ್ರಗಳನ್ನು ಈ ಬೃಹತ್ ಅಭಿಯಾನವು ತಲುಪಲಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು