ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕರ ನಡುವಿನ ಸಣ್ಣ ಜಗಳವೇ ವೈಷ್ಣೋ ದೇವಿ ದೇಗುಲದ ಕಾಲ್ತುಳಿತಕ್ಕೆ ಕಾರಣ- ಡಿಜಿಪಿ

Last Updated 1 ಜನವರಿ 2022, 6:30 IST
ಅಕ್ಷರ ಗಾತ್ರ

ಜಮ್ಮು: ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ನಡೆದ ಕಾಲ್ತುಳಿತಕ್ಕೆ ಕೆಲವು ಯುವಕರ ನಡುವಿನ ಸಣ್ಣ ಜಗಳವೇ ಕಾರಣವಾಗಿದೆ. 'ದುರಾದೃಷ್ಟವತಾಶ್' ಕಾಲ್ತುಳಿತದಲ್ಲಿ 12 ಜನರು ಮೃತಪಟ್ಟಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಶನಿವಾರ ತಿಳಿಸಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಘಟನೆ ಅತ್ಯಂತ ದುರದೃಷ್ಟಕರ. ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ವಲ್ಪ ಸಮಯದಲ್ಲೇ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಘಟನಾ ಸ್ಥಳದ ಪ್ರಾಥಮಿಕ ಮಾಹಿತಿ ಪ್ರಕಾರ, ಕೆಲವು ಯುವಕರ ನಡುವೆ ವಾಗ್ವಾದ ನಡೆದಿದೆ ಮತ್ತು ಕೆಲವೇ ಸೆಕೆಂಡುಗಳಲ್ಲಿ ನೂಕುನುಗ್ಗಲು ಉಂಟಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

'ಪೊಲೀಸರು ಮತ್ತು ಸ್ಥಳೀಯ ಆಡಳಿತದ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸಿದ್ದಾರೆ. ಕೂಡಲೇ ಪರಿಸ್ಥಿತಿಯನ್ನು ತಹಬದಿಗೆ ತರಲಾಗಿದೆ. ಆದರೆ, ಆ ಹೊತ್ತಿಗಾಗಲೇ ಹಾನಿ ಸಂಭವಿಸಿತ್ತು' ಎಂದು ಅವರು ಹೇಳಿದರು.

ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಘಟನೆಯಲ್ಲಿ ಸುಮಾರು 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT