ಶುಕ್ರವಾರ, ಸೆಪ್ಟೆಂಬರ್ 24, 2021
21 °C

ನವದೆಹಲಿ: ನ್ಯೂ ಮಹಾರಾಷ್ಟ್ರ ಭವನದಲ್ಲಿ ಅಗ್ನಿ ಅವಘಡ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಇಲ್ಲಿನ ಕೆ.ಜಿ ಮಾರ್ಗದಲ್ಲಿರುವ ನ್ಯೂ ಮಹಾರಾಷ್ಟ್ರ ಭವನದ ಮೊದಲ ಅಂತಸ್ತಿನಲ್ಲಿ ಸೋಮವಾರ ಬೆಳಿಗ್ಗೆ ಸಣ್ಣ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಈ ಬಗ್ಗೆ ನಮಗೆ ಬೆಳಿಗ್ಗೆ 9.04ಕ್ಕೆ ಮಾಹಿತಿ ಸಿಕ್ಕಿದೆ. ತಕ್ಷಣವೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ನಾಲ್ಕು ವಾಹನಗಳನ್ನು ಕಳುಹಿಸಿ, ಬೆಳಿಗ್ಗೆ 9.15ರ ವೇಳೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಈ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ’ ಎಂದು ದೆಹಲಿಯ ಅಗ್ನಿಶಾಮಕ ಸಿಬ್ಬಂದಿ ಮಾಹಿತಿ ನೀಡಿದರು.

‘ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬಹುಶಃ ಬೆಂಕಿ ಕಾಣಿಸಿಕೊಂಡಿರಬಹುದು’ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

‘ಸದನದ ಮೊದಲ ಅಂತಸ್ತಿನಲ್ಲಿರುವ ‘ಗವರ್ನರ್‌ ಸೂಟ್‌’ನಲ್ಲಿ ಬೆಂಕಿ ಕಾಣಿಸಿಕೊಂಡಿತು, ಅದನ್ನು 15 ನಿಮಿಷಗಳಲ್ಲಿ ನಂದಿಸಲಾಯಿತು’ ಎಂದು ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು