ಸೋಮವಾರ, ಆಗಸ್ಟ್ 2, 2021
25 °C

ರಾಜಸ್ಥಾನ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ವಿಸ್ತೃತ ತನಿಖೆಗೆ ಆದೇಶಿಸಿದ್ದಾರೆ.

‘16 ವರ್ಷದ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿ ಬಳಿಕ ಯುವತಿಯನ್ನು ಬಾವಿಗೆ ಎಸೆದಿದ್ದು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುತ್ತಿದ್ದು ಈ ಸಂಬಂಧ ಸೋಮವಾರ ಸಂತ್ರಸ್ತೆಯ ತಂದೆಯ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ, ಇದಾದ ಬಳಿಕ ತನ್ನ ಹೇಳಿಕೆ ಬದಲಿಸಿರುವ ಬಾಲಕಿಯ ತಂದೆ ಯಾರನ್ನೂ ಆರೋಪಿಗಳು ಎಂದು ಹೆಸರಿಸಿಲ್ಲ. ಇದು ಅತ್ಯಾಚಾರ ಪ್ರಕರಣವಲ್ಲ. ಸಹೋದರಿಯೊಂದಿಗೆ ಜಗಳವಾಡಿದ ಬಳಿಕ ಬಾವಿಗೆ ಹೋಗಿ ಬಿದ್ದಿದ್ದಾಳೆ’ ಎಂದು ಹೇಳಿಕೆ ನೀಡಿರುವುದಾಗಿ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಇದನ್ನೂ ಓದಿ... ಟೂಲ್ ಕಿಟ್ ವಿವಾದ: 'ಸತ್ಯಕ್ಕೆ ಎಂದಿಗೂ ಭಯವಿರುವುದಿಲ್ಲ' ಎಂದ ರಾಹುಲ್ ಗಾಂಧಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು