ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ ಧಾರ್ಮಿಕ ಶಿಕ್ಷಕನಿಂದ ಅತ್ಯಾಚಾರ

Last Updated 28 ಜುಲೈ 2022, 2:08 IST
ಅಕ್ಷರ ಗಾತ್ರ

ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಅಪ್ರಾಪ್ತೆ ಮೇಲೆ ಧಾರ್ಮಿಕ ಶಿಕ್ಷಕ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಯನ್ನು ಬಂಧಿಸಲಾಗಿದೆ.

ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ, ಮಸೀದಿಯ ಧಾರ್ಮಿಕ ಶಿಕ್ಷಕ ಮಂಗಳವಾರ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಬಾಲಕಿಯನ್ನು ಮಸೀದಿಯ ಬಳಿಯ ತನ್ನ ಕೊಠಡಿಗೆ ಕರೆದೊಯ್ದ ಆರೋಪಿಯು ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ.

ಐಪಿಸಿ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT