ಶುಕ್ರವಾರ, ಜನವರಿ 27, 2023
20 °C

ಅತ್ಯಾಚಾರ ಆರೋಪಿ ತಾಯಿಗೆ ಗುಂಡೇಟು ಹೊಡೆದ ಬಾಲಕಿ: ಬಂಧನ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ದೆಹಲಿ: ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದಲ್ಲಿ 50 ವರ್ಷದ ಮಹಿಳೆಯ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಾಲಕಿಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.

ಗುಂಡೇಟಿಗೆ ಒಳಗಾದ ಘೋಂಡಾದ ಸುಬಾಷ್ ಮೊಹಲ್ಲಾದ ನಿವಾಸಿ ಖುರ್ಷಿದಾ ಅವರ ಮಗನ ವಿರುದ್ಧ ಇದೇ ಬಾಲಕಿ 2021ರಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಳು ಎಂಬುದು ನಂತರ ಗೊತ್ತಾಗಿದೆ. .

ಗಾಯಗೊಂಡಿರುವ ಮಹಿಳೆ ಖುರ್ಷಿದಾ ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ 5:30ರಲ್ಲಿ ಸುಭಾಷ್ ಮೊಹಲ್ಲಾದಲ್ಲಿ ಮಹಿಳೆಯೊಬ್ಬರ ಮೇಲೆ ಬಾಲಕಿಯೊಬ್ಬಳು ಗುಂಡು ಹಾರಿಸಿರುವುದಾಗಿ ಭಜನಪುರ ಪೊಲೀಸ್ ಠಾಣೆಗೆ ಕರೆ ಬಂದಿತು. ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿತ್ತು. ನಂತರ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಖುರ್ಷೀದಾ ನಡೆಸುತ್ತಿದ್ದ ಕಿರಾಣಿ ಅಂಗಡಿಗೆ ಬಂದಿದ್ದ ಬಾಲಕಿ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಳು. ಆಪಾದಿತ ಬಾಲಕಿಯು ಖುರ್ಷಿದಾ ಅವರ ಪುತ್ರನ ವಿರುದ್ಧ 2021ರಲ್ಲಿ ಪೋಕ್ಸೊ ಕಾಯಿದೆ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಳು ಎಂಬುದು ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಆಪಾದಿತೆಯನ್ನು ಬಂಧಿಸಲಾಗಿದೆ. ಪಿಸ್ತೂಲನ್ನೂ ವಶಪಡಿಸಿಕೊಳ್ಳಲಾಗಿದೆ. ಗಾಯಗೊಂಡಿರುವ ಖುರ್ಷಿದಾ ಅವರಿಗೆ ಜೆಪಿಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ, ಜಿಟಿಬಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಾಲಕಿ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು