ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ನ ಸಂಗಮ್ನಲ್ಲಿ ಸೋಮವಾರ ರಾತ್ರಿ ಅಪ್ರಾಪ್ತ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಬಾಂಬ್ ತೂರಾಟ ನಡೆದಿದೆ.

ಹುಟ್ಟುಹಬ್ಬದ ಆಚರಣೆಯಲ್ಲಿ ತೊಡಗಿದ್ದವರ ಮೇಲೆ ಮೊದಲಿಗೆ ಗುಂಪೊಂದು ಬಾಂಬ್ ಎಸೆದಿದೆ. ಇದಕ್ಕೆ ಪ್ರತಿಯಾಗಿ ಎದುರಾಳಿ ಗುಂಪು ಕೂಡ ಬಾಂಬ್ ಎಸೆದಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.

ಈ ಬಗ್ಗೆ ಮಾಹಿತಿ ಪಡೆದ ನಗರ ಎಸ್ಪಿ ದಿನೇಶ್ ಕುಮಾರ್ ಸಿಂಗ್, ಪೊಲೀಸ್ ಪಡೆಗಳೊಂದಿಗೆ ಸ್ಥಳಕ್ಕೆ ಧಾವಿಸಿದರು.

ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಎರಡೂ ಗುಂಪಿನವರು ಒಂದೇ ಶಾಲೆಯಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ಸ್ನೇಹಿತನ ಹುಟ್ಟುಹಬ್ಬದ ಆಚರಣೆಗಾಗಿ ವಿದ್ಯಾರ್ಥಿಗಳ ಒಂದು ಗುಂಪು ಸಂಗಮ್ಗೆ ತೆರಳಿತ್ತು. ಅಷ್ಟರಲ್ಲಿ ಅಲ್ಲಿಗೆ ಬಂದಿದ್ದ ಇನ್ನೊಂದು ಗುಂಪು, ಆಚರಣೆಯಲ್ಲಿ ತೊಡಗಿದ್ದವರ ಮೇಲೆ ಬಾಂಬ್ ಎಸೆದಿತ್ತು. ಇದಕ್ಕೆ ಪ್ರತಿಯಾಗಿ ಅವರೂ ಬಾಂಬ್ ಎಸೆದರು. ಎರಡೂ ಗುಂಪಿನಲ್ಲಿದ್ದವರೂ ಅಪ್ರಾಪ್ತರೇ. ಈ ಹಿಂದೆಯೂ ಎರಡೂ ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿವೆ ಎಂದು ನಗರ ಎಸ್ಪಿ ತಿಳಿಸಿದ್ದಾರೆ.

ಸಿವಿಲ್ ಲೈನ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಘಟನೆಗೆ ತಕ್ಷಣದ ಕಾರಣಗಳೇನು ಎಂಬುದು ಇನ್ನೂ ಖಚಿತವಾಗಿಲ್ಲ.

ಆರೋಪಿಗಳನ್ನು ಬಂಧಿಸಲು ಪೊಲೀಸರು ವಿವಿಧೆಡೆ ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.