ಬುಧವಾರ, ಮೇ 18, 2022
23 °C

ಕೇರಳದ ಪೊಲೀಸ್ ಠಾಣೆ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರಂ: ನೆಯ್ಯಟ್ಟಿಂಕರದ ಆರ್ಯಂಕೋಡ್‌ನಲ್ಲಿರುವ ಸ್ಥಳೀಯ ಪೊಲೀಸ್ ಠಾಣೆಯ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಮಂಗಳವಾರ ಬೆಳಗ್ಗೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಪೊಲೀಸರು ಅವರನ್ನು ಹಿಡಿಯಲು ಯತ್ನಿಸಿದರಾದರೂ, ಘಟನೆ ನಡೆದ ಕೂಡಲೇ ಇಬ್ಬರೂ ಸ್ಥಳದಿಂದ ಪರಾರಿಯಾಗಿದ್ದಾರೆ.

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಪೊಲೀಸ್ ಠಾಣೆಯ ಮೇಲೆ ಎರಡು ಬಾಂಬ್‌ಗಳನ್ನು ಎಸೆದಿದ್ದಾರೆ. ಆದರೆ, ಅವರೆಡೂ ಸ್ಫೋಟಗೊಳ್ಳಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೆಟ್ರೋಲ್ ತುಂಬಿದ ಬಾಟಲಿಗಳಲ್ಲಿ ಒಂದನ್ನು ಠಾಣೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಜೀಪಿಗೆ ಎಸೆದಿದ್ದರಿಂದ ಹಿಂಬದಿ ಗಾಜು ಜಖಂಗೊಂಡಿದೆ. ಮತ್ತೊಂದು ಬಾಟಲಿ ಅಲ್ಲೇ ಇದ್ದ ಮರಳಿನ ರಾಶಿಯ ಮೇಲೆ ಬಿದ್ದಿದ್ದರಿಂದ ಯಾವುದೇ ಹಾನಿಯಾಗಿಲ್ಲ' ಎಂದು ಅವರು ಹೇಳಿದರು.

ಸದ್ಯ ತನಿಖೆ ಪ್ರಗತಿಯಲ್ಲಿದ್ದು, ಘಟನೆಯ ಹಿಂದಿರುವ ದುಷ್ಕರ್ಮಿಗಳ ಬಗ್ಗೆ ಪೊಲೀಸರಿಗೆ ಸಾಕಷ್ಟು ಸುಳಿವುಗಳಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು